ಬೆಂಗಳೂರು: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆಯುವ ಎಲ್ಲಾ ಮುನ್ಸೂಚನೆ ಸಿಕ್ಕಿದೆ. ಇನ್ನೆರಡು ದಿನ ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ನಾಳೆ ಮತ್ತು ನಾಡಿದ್ದು (ಶನಿವಾರ ಮತ್ತು ಭಾನುವಾರ) ಗುಡುಗ, ಮಿಂಚು ಸಹಿತ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಮಳೆ.?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಜೋರು ಮಳೆಯಾಗಲಿದೆ.
ಎಚ್ಚರ.. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರಿ ಮಳೆ.!
ವಾಯುಭಾರ ಕುಸಿತ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಮೋಡಗಳು 24 ಕಿ.ಮೀ ವೇಗದಲ್ಲಿ ಈಶಾನ್ಯಕ್ಕೆ ಚಲಿಸುತ್ತಿವೆ. ಹೀಗಾಗಿ, ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.