ಬಾಗಲಕೋಟೆ: ಸೆ.27 : ಜಿಲ್ಲೆಯಲ್ಲಿ 107 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 46 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣಗಳು ರವಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9867 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 8648 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 3, ಬಾದಾಮಿ 1, ಹುನಗುಂದ 24, ಬೀಳಗಿ 1, ಮುಧೋಳ 9, ಜಮಖಂಡಿ 8 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1525 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 98261 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 86362 ನೆಗಟಿವ್ ಪ್ರಕರಣ, 9867 ಪಾಜಿಟಿವ್ ಪ್ರಕರಣ ಹಾಗೂ 105 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1114 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 722 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News