
ಇಲ್ಲಕಲ್ಲ :
ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 150000/- ಮೊತ್ತದ ಡಿಡಿಯನ್ನು ಜಿಲ್ಲಾ ನಿರ್ದೇಶಕರಾದ ಚನಕೇಶವ ಅವರು ದೇವಸ್ಥಾನ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಹುನಗುಂದ ತಾಲೂಕಿನ ಯೋಜನಾಧಿಕಾರಿಗಳಾದ ಸಂತೋಷ ಹಾಗೂ ವಲಯ ಮೇಲ್ವಿಚಾರಕಿ ಆಶಾ ಸ್ಥಳೀಯ ಸೇವಾಪ್ರತಿನಿಧಿ ಊರಿನ ಗಣ್ಯರು ಗ್ರಾಮಸ್ಥರು.ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ : ಮುಸ್ತಫಾ ಮಾಸಪತಿ