ಮೈಸೂರಿನಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸುರಿದ ಭಾರೀ ಮಳೆಯಿಂದ ಮೈಸೂರಿನ ಹುಣಸೂರು ತಾಲೂಕಿನಲ್ಲಿ ನಾಲ್ಕು ಮನೆಗಳು ಕುಸಿದಿವೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಪ್ರಸಿದ್ದ ಗೋಲ್ಡನ್ ಟೆಂಪಲ್‌ಗೆ ತೆರಳುವ ಸೇತುವೆ ಬಂದ್ ಆಗಿದೆ. ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆಯಾಗಿರುವುದರಿಂದ ಪಿರಿಯಾಪಟ್ಟಣದ ಕೊಪ್ಪ ಗ್ರಾಮದಲ್ಲಿ ಸೇತುವೆ ಮುಳುಗಡೆಯಾಗಿದೆ. ಗೋಲ್ಡನ್ ಟೆಂಪಲ್ಗೆ ತೆರಳಲು ಪರ್ಯಾಯ ಮಾರ್ಗ ಬಳಸುವ ಸೂಚನೆ ನೀಡಲಾಗಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಭತ್ತದ ಗದ್ದೆಗೆ ನೀರು ನುಗ್ಗಿದೆ.
ಕೇರಳದ ವಯನಾಡಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹೆಚ್.ಡಿ. ಕೋಟೆಯ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬಂದಿದೆ.