Breaking News

ಕುಲ್ಗಾಂನಲ್ಲಿ ಸೇನೆಯ ಬಂಕರ್ ಮೇಲೆ ಉಗ್ರರ ದಾಳಿ : ಓರ್ವ ಅಧಿಕಾರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಅರೆಸೇನಾ ಪಡೆಯ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಅಧಿಕಾರಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ 8-45ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ನಿಹಮಾದಲ್ಲಿನ ಕ್ಯಾಂಪ್ ಹೊರಗಡೆ ಸಿಆರ್ ಪಿಎಫ್ 18ನೇ ಬೆಟಾಲಿಯನ್ ನ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಗುಂಡಿನ ದಾಳಿ ವೇಳೆ ಸಿಆರ್ ಪಿಎಫ್ ನ ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಆನಂದ ಪರಾಳದ

ಶ್ರೀ ಆನಂದ ಪರಾಳದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತಿ ಸದಸ್ಯರು ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.