ಮುಂಬೈ: ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಜಯ್ ದತ್ ಪತ್ನಿ ಮಾನ್ಯತಾ ದತ್, ಸಹೋದರಿ ಪ್ರಿಯಾ ದತ್ ಮತ್ತು ಇತರ ಕುಟುಂಬ ಸದಸ್ಯರು ಅವರ ಜೊತೆ ಆಸ್ಪತ್ರೆಗೆ ತೆರಳುತ್ತಿರುವ ಫೋಟೋಗಳು ಕಾಣಿಸಿಕೊಂಡಿವೆ. ಈ ಕುರಿತು ಟ್ವೀಟ್ ಮಾಡಿರುವ ದತ್, ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದೇನೆ. ನನಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ, ಸಂಜಯ್ ದತ್ ಉಸಿರಾಟ ತೊಂದರೆಯಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸದ್ಯ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ತಿಳಿಸಿದ್ದಾರೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News