ಕುಷ್ಟಗಿ :ತಹಶೀಲ್ದಾರ್ ಕಾರ್ಯಾಲಯದಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ. ಈ ಹಿಂದೆ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಗುರುಬಸವರಾಜ್ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದೆ. ಗುರುಬಸವರಾಜ ತಹಶೀಲ್ದಾರ್ ಆಗಿದ್ದಾಗ ತಮ್ಮ ಸಹೋದ್ಯೋಗಿ ಕಚೇರಿಯಲ್ಲಿ ಕಿಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತಮ್ಮ ಕಚೇರಿಯಲ್ಲಿ ಬಂದು ನಿಂತಿದ್ದ ಮಹಿಳಾ ಸಿಬ್ಬಂದಿಯನ್ನು ಕಿಸ್ ಮಾಡಿ ಕಚೇರಿಯ ಘನತೆಯನ್ನ ಮಣ್ಣು ಪಾಲು ಮಾಡಿದ್ದಾರೆ ಎಂದು ಕೆಲ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗುರುಬಸವರಾಜ್ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ವೈರಲ್ ಆಗಿದೆ. ಅಲ್ಲಿಂದ ವರ್ಗಾವಣೆಯಾಗಿ ಈಗ ಗುರುಬಸವರಾಜ ಸದ್ಯ ಕೊಪ್ಪಳ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿದ್ದಾರೆ.
ಅಲ್ಲಿಂದ ವರ್ಗಾವಣೆಗೊಂಡ ಬಳಿಕ ಅವರ ಕಿಸ್ಸಿಂಗ್ ಸೀನ್ ಈಗ ವೈರಲ್ ಆಗಿದೆ. ಉನ್ನತ ಸ್ಥಾನದಲ್ಲಿರುವ ಅಧಿಕಾರಿಯೇ ತಮ್ಮ ಕಚೇರಿಯಲ್ಲಿ ಈ ರೀತಿ ರಾಸಲೀಲೆ ಮಾಡಿ ಹುದ್ದೆಯ ಘನತೆಗೆ ಧಕ್ಕೆ ತಂದಿದ್ದಾರೆ ಅಂತ ಅಧಿಕಾರಿ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.