Breaking News

ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷ ಸೆ.1ರಿಂದ ಆರಂಭ

ಬೆಂಗಳೂರು ; ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಸಚಿವ ಡಾ ಅಶ್ವಥ್ ನಾರಾಯಣ್ ಹೇಳಿದ್ದಾರೆ. 
ಈ ಸಂಬಂಧ ಟ್ವೀಟ್ ಮಾಡಿರುವ ಅವರು ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ

ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆಎಂದು ತಿಳಿಸಿದ್ದಾರೆ .
ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಶೈಕ್ಷಣಿಕ ವರ್ಷದ ಆರಂಭದ ಜತೆಯಲ್ಲಿಯೇ ಅಂತಿಮ ವರ್ಷದಲ್ಲಿರುವ ಎಲ್ಲ ಪದವಿ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜತೆಗೆ, ಬ್ಯಾಕ್ ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ .

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಆನಂದ ಪರಾಳದ

ಶ್ರೀ ಆನಂದ ಪರಾಳದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತಿ ಸದಸ್ಯರು ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.