Breaking News

ಸಿಂದಗಿಯಲ್ಲಿ ದಲಿತ ಯುವಕನ ಹತ್ಯೆ ಮನುಷ್ಯರು ತಲೆತಗ್ಗಿಸುವಂತಹ ಕೃತ್ಯ: ಸಿದ್ದರಾಮಯ್ಯ

ಬೆಂಗಳೂರು : ವಿಜಯಪುರ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದದ್ದು, ಮನುಷ್ಯರೆಲ್ಲರೂ ತಲೆ ತಗ್ಗಿಸುವಂತಹದ್ದಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ఆలి ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವವರಿಗೆ ಹಾಗೂ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಸಮಾಜದಲ್ಲಿ ಸಿಗುತ್ತಿರುವ ಬೆಂಬಲವೇ ಇಂತಹ ಕೃತ್ಯಗಳು ನಡೆಯುವುದಕ್ಕೆ ಕಾರಣವಾಗುತ್ತವೆ ಎಂದು ಅಭಿಪ್ರಾಯಿಸಿದ್ದಾರೆ.

ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆ ಕುತಂತ್ರಗಳು ಹೆಚ್ಚಾಗುತ್ತಿರುವುದರಿಂದ ದಲಿತರ ಮೇಲೆ ಹಲ್ಲೆ, ಹತ್ಯೆಗಳು ಹೆಚ್ಚಾಗುತ್ತಿವೆ. ದಲಿತ ಯುವಕನ ಹತ್ಯೆ ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿದ ಪ್ರಯತ್ನಕ್ಕೆ ಯಾರೇ ಮುಂದಾದರು ಅವರ ಮುಖ್ಯವಾದ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

About vijay_shankar

Check Also

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.