ಕಾರವಾರ: ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಬಳಕೆ ಬಗ್ಗೆ ಅರಿವು ಮೂಡಿಸಬೇಕು. ಜೊತೆಗೆ ಮಾಸ್ಕ್‍ನ್ನು ಸರಿಯಾಗಿ ಬಳಸದಿದ್ದಲ್ಲಿ ಅಂತಹವರಿಗೆ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ ಅವರು ತಿಳಿಸಿದರು
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಎ ಸಿ ಮತ್ತು ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫ್‍ರೆನ್ಸ್ ಮೂಲಕ ಮಾಹಿತಿ ಪಡೆದು ಅವರು ಮಾತನಾಡಿ,
ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚಳವಾಗಿತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಪ್ರತಿಯೊಬ್ಬರೂ ಮನೆಯಿಂದ ಹೊರಡುವಾಗ ಸರಿಯಾಗಿ ಮಾಸ್ಕ್ ಧರಿಸಬೇಕು, ಮಾತನಾಡುವಾಗ ಮಾಸ್ಕ ಧರಿಸಿಯೇ ಮಾತನಾಡಬೇಕು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಜೊತೆಗೆ ಸಂತೆ ದಿನಗಳಲ್ಲಿ ಅಂತರ ಕಾಯ್ದುಕೊಳ್ಳುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು ಎಂದು ಅವರು ತಿಳಿಸಿದರು.
ಮಾಸ್ಕ್ ಅನ್ನು ಸರಿಯಾಗಿ ಬಳಸದಿರುವವರಿಗೆ ದಂಡ ವಿಧಿಸುವಾಗ ಪೊಲೀಸ್ ಇಲಾಖೆಯ ಸಹಕಾರ ಪಡೆದುಕೊಳ್ಳಬೇಕು. ದಂಡ ವಸೂಲಿ ಸಂಬಂಧಿಸಿದಂತೆ ಛಾಯಾಚಿತ್ರ ಸಹಿತ ಕಾರ್ಯ ಪ್ರವೃತ್ತರಾಗಬೇಕು ಮತ್ತು ವಿವಿಧ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಸುದ್ದಿ ಯಾಗಿ ಪ್ರಚಾರ ಪಡಿಸಬೇಕೆಂದು ಅವರು ಸಲಹೆ ನೀಡಿದರು. ಕೋವಿಡ್‍ನಿಂದ ಮೃತಪಟ್ಟವರ ಮಾಹಿತಿಯನ್ನು ಆಯಾ ದಿನದಲ್ಲಿಯೇ ನೀಡಬೇಕು ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್. ಕೆ. ಅವರು ಮಾತನಾಡಿ ತಹಶೀಲ್ದಾರರು, ಇಒಗಳು ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪ್ರಾಥಮಿಕ ಸಂಪರ್ಕಿತರನ್ನು ಗುರ್ತಿಸಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ಜನದಟ್ಟಣೆ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಹೆಚ್ಚಿನ ಕೋವಿಡ್ ಪರೀಕ್ಷೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾಧ ಅಜಿತ್, ಪ್ರಿಯಾಂಗಾ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ ತಹಶೀಲ್ದಾರ ಆರ್. ವಿ. ಕಟ್ಟಿ ಸೇರಿದಂತೆ ಇತರರು ಇದ್ದರು.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News