ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಘೋಘಿಸಿದ್ದಾರೆ. ಯಡಿಯೂರಪ್ಪ
ಇಂದಿನ ಕೊರೋನಾ ನಿಯಂತ್ರಣ ಸಂಬಂಧ ನಡೆದಂತ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಂತ್ರಿ ಮಂಡಲದ ಸಭೆಯ ನಂತರ ಈ ಕೋವಿಡ್ ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾಷ್ಟ್ರ ಮೀರಿಸಿ, ಬೆಂಗಳೂರು ಸುತ್ತಾ ಮುತ್ತಾ ಹೆಚ್ಚು ಹರಡುತ್ತಿದೆ. ಹೀಗಾಗಿ ಸಚಿವ ಸಂಪುಟ ಸದಸ್ಯರು, ತಜ್ಞರ ಜೊತೆಗೆ ಚರ್ಚಿಸಿ, ಕೆಲವು ನಿರ್ಧಾರಕ್ಕೆ ಬಂದಿದ್ದೇವೆ ಎಂದರು.
ಕೋವಿಡ್ ತಡೆಯೋದಕ್ಕೆ ಬಿಗಿ ಕ್ರಮವಾಗಿ ನಾಳೆ ರಾತ್ರಿಯಿಂದ 14 ದಿನ ಬಿಗಿ ಜಾರಿಯಲ್ಲಿರುತ್ತದೆ. ಇದು ಜಾರಿಯಲ್ಲಿ ಇರಲಿದೆ ಎಂದರು. ರಾಜ್ಯಾಧ್ಯಂತ, ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ನಂತ್ರ ಎಲ್ಲವೂ ಸಂಪೂರ್ಣವಾಗಿ ಬಂದ್ ಎಂದರು. ಮಾಡಲಾಗುತ್ತಿದೆ

ಗಾರ್ಮೆಂಟ್ಸ್ ನೌಕರರನ್ನು ಬಿಟ್ಟು, ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಿಲ್ಲ. ವೈದ್ಯಕೀಯ, ಅಗತ್ಯ ಸೇವೆ ಎಂದಿನಂತೆ ಇರಲಿದೆ. ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ರವೆರೆಗ ಕರ್ಪ್ಯೂ ಮುಂದುವರೆಯಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಬಂದೋಬಸ್ತ್ ಮಾಡಲಿದ್ದಾರೆ. ತಾಲೂಕು ಆಡಳಿತ ಕೂಡ ನಿಯಂತ್ರಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಹೊಸ ಮಾರ್ಗಸೂಚಿ ಪ್ರಕಟಿಸಲಿದ್ದಾರೆ. ನಾಳೆಯಿಂದ 14 ದಿನಗಳವರೆಗೆ ಕರ್ನಾಟಕ ಸಂಪೂರ್ಣವಾಗಿ ಬಂದ್ ಆಗಲಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ವಾಹನ ಸಂಚಾರ ಕೂಡ ಇರೋದಿಲ್ಲ. ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಅವರು ಸಂಪೂರ್ಣ ಲಾಕ್ ಡೌನ್ ಸಂಬಂಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News