ನವದೆಹಲಿ: ಆದಾರ ಕಾರ್ಡ ಜೊತೆಗೆ ಪಿಎಎನ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಜೂ.30 ವರೆಗೆ ವಿಸ್ತರಣೆ ಮಾಡಿದೆ.
ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಆಧಾರ್ ಕಾರ್ಡ್ ಪಿಎಎನ್ ಜೋಡಣೆಗೆ ನೀಡಲಾಗಿದ್ದ ಗಡುವು ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಐಟಿ ಇಲಾಖೆ ತಿಳಿಸಿದೆ.
ತೆರಿಗೆದಾರರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಈ ಹಿಂದೆ ಮಾ.31 ನ್ನು ಗಡುವನ್ನಾಗಿ ಘೋಷಿಸಲಾಗಿತ್ತು. ಕಳೆದ ವರ್ಷ ಆಗಸ್ಟ್ ನ ವರೆಗೂ 32.71 ಕೋಟಿ ಪಿಎಎನ್ ಗಳು ಆಧಾರ್ ಗೆ ಜೋಡಣೆಯಾಗಿದ್ದೆ.