
ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಕಿರುಸಾಲ / ಸ್ವಸಹಾಯ ಗುಂಪುಗಳಿಗೆ ಸಹಾಯ ಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ್ಯಾಭಿವೃದ್ಧಿ/ಉದ್ಯಮಶೀಲತಾ ತರಬೇತಿಯೋಜನೆಗಳಿಗೆ ಪ್ರವರ್ಗ-1ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, ಬಾರ್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುಂಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ,
ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿಮಹದೇವ್, ಮಡ್ಡರ್, ಮೀನಗಾರ್,
ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, ವಾಗಿ ಜಾತಿಗೆ
ಸೇರಿದವರು ಅರ್ಜಿ ಸಲ್ಲಿಸಬಹುದು.
ಯಾದಗಿರಿ ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ
ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ
ವ್ಯವಸ್ಥಾಪಕರ ಕಚೇರಿಯಿಂದ ಅರ್ಜಿ ನಮೂನೆ ಪಡೆಯಬಹುದು. ನಿಗಮದ
ವೆಬ್‍ಸೈಟ್ ವಿಳಾಸ https://ambigaradevelopment.karnataka.gov.in ಗೆ ಭೇಟಿ ನೀಡಿ ಆನ್‍ಲೈನ್
ಮೂಲಕ ಸಹ ಅರ್ಜಿ ಸಲ್ಲಿಸಬಹುದು. ಅರ್ಜಿಯಲ್ಲಿ ನಮೂದಿತ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು. ಆಗಸ್ಟ್ 12ರಂದು ಸಂಜೆ
4.30 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಮತ್ತು ನಿಗಮದ ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News