ಜನಸಾಮಾನ್ಯರು ಕಡಿಮೆ ದರದಲ್ಲಿ ಮನೆಗಳನ್ನು ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಏಪ್ರಿಲ್ 30 ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಕಲಬುರಗಿಯಲ್ಲಿ ಪ್ರಕಟಿಸಿದ್ದಾರೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ವಿತರಣೆ ಮಾಡಬೇಕೆಂಬುದು ಸರ್ಕಾರದ ಪ್ರಮುಖ ಉದ್ದೇಶ ಹೀಗಾಗಿ ಇದೇ 30ರಿಂದ ಅನ್ವಯವಾಗುವಂತೆ ಉಚಿತ ಮರಳು ನೀತಿ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಮರಳು ಅಕ್ರಮ ತಡೆಗಟ್ಟುವ ಉದ್ದೇಶದಿಂದ ಉಚಿತ ಮರಳು …
Read More »ಕೇರಳದಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ: ಉದ್ಯಮಿ ಯೂಸುಫ್ ಅಲಿ ಸಹಿತ 7 ಮಂದಿ ಸುರಕ್ಷಿತ
ಕೇರಳ ಮೂಲಕ ಬಹುರಾಷ್ಟ್ರೀಯ ಸಂಸ್ಥೆ ಲುಲು ಗ್ರೂಪ್ ಆಫ್ ಕಂಪೆನಿಯ ಮಾಲಕ ಯೂಸುಫ್ ಅಲಿ, ಅವರ ಪತ್ನಿ, ಮೂವರು ಸಿಬ್ಬಂದಿ ಸಹಿತ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಭಾನುವಾರ ಬೆಳಿಗ್ಗೆ ಕೊಚ್ಚಿಯಲ್ಲಿ ಪತಗೊಂಡಿದ್ದು, ಎಲ್ಲ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಡಾ ಯೂಸುಫ್ ಅಲಿ ಸಹಿತ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪನಂಗಾಡ್ ಎಂಬಲ್ಲಿನ ಕೇರಳ ಮೀನುಗಾರಿಕೆ ಹಾಗೂ ಸಮುದ್ರ ಅಧ್ಯಯನ ವಿಶ್ವವಿದ್ಯಾಲಯದ ಆವರಣದ ಔಗು ಪ್ರದೇಶದಲ್ಲಿ ಏಕಾಏಕಿ ಭೂಸ್ಪರ್ಶ …
Read More »ಹೇಗಿದೆ ನೋಡಿ ಆರೋಗ್ಯ ಸಿಬ್ಬಂದಿ ಕೋವಿಡ್ ಟೆಸ್ಟ್ ಕಳ್ಳಾಟ…!
ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಪ್ರತಿದಿನ ಟಾರ್ಗೆಟ್ ನೀಡುತ್ತಿದ್ದು, ಇದೀಗ ಕೋವಿಡ್ ಟೆಸ್ಟ್ ನಲ್ಲೇ ಆರೋಗ್ಯ ಸಿಬ್ಬಂದಿ ಕಳ್ಳಾಟ ನಡೆಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂಗ್ರಹಿಸುವ ಬದಲು ಖಾಲಿ ಕಡ್ಡಿಯನ್ನು ಲಿಕ್ವಿಡ್ ಬಾಟಲ್ ಗೆ ಹಾಕಿ ಅದನ್ನು ಲ್ಯಾಬ್ ಗೆ …
Read More »ಈ ವರ್ಷ ಬೇಸಿಗೆ ರಜೆ ಕೊಡಲ್ಲ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ – ಇಲ್ಲಾ ಡಾ. ಸಿ. ಎನ್. ಅಶ್ವತ್ಥನಾರಾಯಣ
ಬೆಂಗಳೂರು: ಕೋವಿಡ್ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರದಂದು ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ …
Read More »ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ
ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ, ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಹ ಪ್ರಯಾಣಿಕರ ಪರದಾಟ ಮುಂದುವರಿದಿದೆ. ಹಲವು ಕಡೆಗಳಲ್ಲಿ ಓಡಾಟಕ್ಕೆ ಖಾಸಗಿ ಬಸ್ಸುಗಳು ಸಿಗುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವಾಗಲೂ ಗಿಜಿಗಿಡುತ್ತಿದ್ದ ಕೆ ಆರ್ ಮಾರುಕಟ್ಟೆ, ಮೆಜೆಸ್ಟಿಕ್ ನಲ್ಲಿ ಇಂದು ಖಾಲಿ ಖಾಲಿಯ ವಾತಾವರಣ. ಹಲವು …
Read More »
ಕೋರ್ಟ್ ತೀರ್ಪು ಕೊಡುವ
ಪೂರ್ವದಲ್ಲಿ ಮಠದ ಆಸ್ತಿ ಮಠಕ್ಕೆ ಬಿಡಬೇಕು- ದಿಂಗಾಲೇಶ್ವರ
ಸ್ವಾಮೀಜಿ
ಹುಬ್ಬಳ್ಳಿ- ಮೂರುಸಾವಿರ ಮಠ ಮರಳಿ ಪಡೆಯಲು ನಮ್ಮ ಹೋರಾಟ ನಿರಂತರವಾಗಿರಲಿದೆ. ಇದರಿಂದ ಹಿಂದೆ ಸರಿಯುವ ಮಾತು ಇಲ್ಲ ಎಂದು ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ವಿಷಯ ಕುರಿತಂತೆ ಮಠಗಳ ಆಸ್ತಿ ಉಳಿಸುವ ಉದ್ದೇಶದಿಂದ ಅಖಿಲ ಭಾರತ ವೀರಶೈವ ಮಹಾಸಭೆ ಶಂಕರ್ ಬಿದರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಈ ಸಮಿತಿ ಮೂರುಸಾವಿರ ಮಠದ ಆಸ್ತಿ ಮರಳಿ ಕೊಡಿಸುವ ಕೆಲಸ, ಮಾಡಬೇಕು ಎಂದು ಒತ್ತಾಯಿಸಿದರು. ಕೆ …
Read More »ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ ಇವರಿಂದ ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು
ಅಮೀನಗಡ: ಬಾಗಲಕೋಟೆ ಜಿಲ್ಲಾ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ ಎಲ್ಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಇವರಿಂದ ನಾಡಿನ ಸಮಸ್ತ ನೇಕಾರ ಬಾಂಧವರಿಗೆ ಹಾಗೂ ಎಲ್ಲಾ ಜನತೆಗೆ ೨೦೨೧ನೇ ಸಾಲಿನ ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಶ್ರೀ ಮಲ್ಲಪ್ಪ ಗುರುಸಿದ್ದಪ್ಪ ನೆಮದಿ ಅಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ,ಶೂಲೇಭಾವಿ, ಇವರಿಂದ ಶ್ರೀ ಆನಂದ ರಾಮಪ್ಪ ಜನಿವಾರದ. …
Read More »ವಾಹನಗಳಲ್ಲಿ ಏಕಾಂಗಿ ಇದ್ದು ಓಡಾಡುವವರೂ ಮಾಸ್ಕ್ ಕಡ್ಡಾಯ – ದೆಹಲಿ ಹೈಕೋರ್ಟ್ ಸ್ಪಷ್ಟನೆ
ಸಾರ್ವಜನಿಕ ಸ್ಥಳಗಳಲ್ಲಿ ಏಕಾಂಗಿಯಾಗಿ ವಾಹನಗಳಲ್ಲಿ ಓಡಾಡುವವರು ಕೂಡಾ ಕೊರೊನಾ ನಿಯಮಗಳನ್ನು ಪಾಲಿಸಿ ಮಾಸ್ಕ್ ಧರಿಸಬೇಕು ಎಂದು ದೆಹಲಿ ಹೈಕೋಟ್ ಬುಧವಾರ ಹೇಳಿದೆ. ಏಕಾಂಗಿಯಾಗಿ ವಾಹನ ಚಲಾಯಿಸುತ್ತಿರುವಾಗ ಮಾಸ್ಕ್ ಧರಿಸದಿದ್ದಕ್ಕಾಗಿ ದಂಡ ಹಾಕಿದ್ದನ್ನು ಪ್ರಶ್ನಿಸಿದ್ದ ಅರ್ಜಿದಾರರೊಬ್ಬರ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಪ್ರತಿಭಾ ಎಂ. ಸಿಂಗ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ನೀವು ಕಾರಿನಲ್ಲಿ ಏಕಾಂಗಿಯಾಗಿದ್ದರೂ, ಮಾಸ್ಕ್ ಧರಿಸಲು ಏಕೆ ಆಕ್ಷೇಪಿಸುತ್ತೀರಿ? ಇದು ನಿಮ್ಮ ಸ್ವಂತ ಸುರಕ್ಷತೆಗಾಗಿ. ಸಾಂಕ್ರಾಮಿಕ ಬಿಕ್ಕಟ್ಟು ಹೆಚ್ಚಾಗಿದೆ. ಒಬ್ಬ ವ್ಯಕ್ತಿಗೆ …
Read More »ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್
ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, “ಯತ್ನಾಳ್ ಅವರಷ್ಟು ಹಗಲು ಕನಸು ಕಾಣುವ ವ್ಯಕ್ತಿ ಈ ಭೂಮಿ ಮೇಲೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ. ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ, ಮೇ 2 ರ ನಂತರ ಮುಖ್ಯಮಂತ್ರಿ ಯಡಿಯೂರಪ್ಪರ ಬದಲಾವಣೆ ಆಗುವುದು ಗ್ಯಾರಂಟಿ. ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ ಎಂದು ಬಿಜಿಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. …
Read More »ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ಸುಗಳ ಓಡಾಟ ಜೊರ್
ಬೆಂಗಳೂರು: ವೇತನ ಪರಿಷ್ಕರಣೆಯ ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಇಂದು ರಾಜ್ಯ ರಸ್ತೆ ಸಾರಿಗೆಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬಸ್ ಸಂಚಾರ ಸ್ತಬ್ಧವಾಗಿದೆ. ಜನರು ದಿನನಿತ್ಯದ ವಹಿವಾಟುಗಳಿಗೆ, ಕಾರ್ಯಗಳಿಗೆ ಬಸ್ ಗಳನ್ನೇ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News