Breaking News

vijay_shankar

ಸಿ.ಡಿ ಯುವತಿ ಪರ ವಕೀಲ ಜಗದೀಶ್ ಹೆಸರು ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಣಿಯೇ ಆಗಿಲ್ಲ!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಪರ ವಕಾಲತ್ತು ವಹಿಸಿರುವ ವಕೀಲ ಕೆ.ಎನ್ ಜಗದೀಶ್ ಕುಮಾರ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಜಗದೀಶ್ ಕುಮಾರ್ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ಹೆಸರು ನೋಂದಾಯಿಸಿ ಕೊಂಡಿಲ್ಲ. ಅಲ್ಲದೆ, ಆ ಹೆಸರಿನಲ್ಲಿ ಯಾವುದೇ ವಕೀಲಿಕೆ ಸನ್ನದು ವರ್ಗಾವಣೆ ಕೋರಿ ಅರ್ಜಿ ಬಂದಿಲ್ಲ ಎಂದು ರಾಜ್ಯ ವಕೀಲರ ಪರಿಷತ್ತು ತಿಳಿಸಿದೆ. ಒಂದು ವೇಳೆ ಜಗದೀಶ್ ಬೇರೆ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿಸಿಕೊಂಡಿದ್ದರೆ, …

Read More »

ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರದಲ್ಲಿ ಬುಧವಾರ ಭಾರೀ ಕಡಿತವನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಆ ಆದೇಶವನ್ನು ಇಂದು ಬೆಳಿಗ್ಗೆಯೇ ಹಿಂಪಡೆದುಕೊಂಡಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್‌ಎಸ್‌ಸಿ ಮತ್ತು ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳ ಕಡಿತವನ್ನು ಸರ್ಕಾರ ನಿನ್ನೆ ಘೋಷಿಸಿತ್ತು. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಭಾರತ ಸರ್ಕಾರದ ಸಣ್ಣ ಉಳಿತಾಯ …

Read More »

ಆಧಾರ್ – ಪಿಎಎನ್ ಜೋಡಣೆಗೆ ಇದ್ದ ಗಡುವು ಜೂ.30 ಕ್ಕೆ ವಿಸ್ತರಣೆ

ನವದೆಹಲಿ: ಆದಾರ ಕಾರ್ಡ ಜೊತೆಗೆ ಪಿಎಎನ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಜೂ.30 ವರೆಗೆ ವಿಸ್ತರಣೆ ಮಾಡಿದೆ. ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಆಧಾರ್ ಕಾರ್ಡ್ ಪಿಎಎನ್ ಜೋಡಣೆಗೆ ನೀಡಲಾಗಿದ್ದ ಗಡುವು ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಐಟಿ ಇಲಾಖೆ ತಿಳಿಸಿದೆ. ತೆರಿಗೆದಾರರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ತನ್ನ ಹೇಳಿಕೆಯಲ್ಲಿ …

Read More »

ಸಿಡಿ ಪ್ರಕರಣದ ಕುರಿತು ನನ್ನನ್ನು ಏನೂ ಕೇಳಬೇಡಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ನನ್ನನ್ನು ಏನೂ ಕೇಳಬೇಡಿ. ಈ ವಿಚಾರದಲ್ಲಿ ಹೆಚ್ಚು ಆಸಕ್ತಿ ಇಲ್ಲ ಅದು ಕಾನೂನು ರೀತಿ ನಡೆಯುತ್ತದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು. ಕೋಲಾರದ ನಿರ್ಮಿತಿ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್ಚು ಆಸಕ್ತಿಯಿಂದ ವ್ಯಾಖ್ಯಾನ ಮಾಡೋದು ನನ್ನ ಯೋಗ್ಯತೆ, ಗೌರವಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಆದರೂ ಆಗ್ರಹ ಮಾಡಬಹುದು, ಯಾರಾದರು ಮಾಡಬಹುದು. ಅಧಿವೇಶನದ ಸಮಯದಲ್ಲಿ ನ್ಯಾಯವಾಗಿ ಮಾತನಾಡಿದ್ದೇನೆ ಎಂದರು. ಸಿಡಿ ಸಂತ್ರಸ್ತೆ …

Read More »

ರಾಜಾಹುಲಿ ವಿರುದ್ಧ ತೊಡೆ ತಟ್ಟಿದ ಈಶ್ವರಪ್ಪ.!

ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ ವಿರುದ್ಧವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಸಿಡಿದೆದ್ದಿದ್ದಾರೆ. ತಮ್ಮ ಇಲಾಖೆಯ ಕುರಿತಂತೆ ಸಿಎಂ ಹಸ್ತ ಕ್ಷೇಪದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತು ಸಿಎಂ ಯಡಿಯೂರಪ್ಪ ವಿರುದ್ಧವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಪತ್ರದ ಮೂಲಕ ದೂರು ನೀಡಿರುವ ಅವರು, ತಮ್ಮ …

Read More »

ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಭಾರತ ಮೂಲದ ಇಂಡಿಯನ್-ಅಮೆರಿಕನ್ ರೂಪಾ ರಂಗ ಪುಟ್ಟಗುಂಟಾ ಅವರನ್ನು ಫೆಡರಲ್ ನ್ಯಾಯಾಧೀಶರನ್ನಾಗಿ ನೇಮಿಸುವ ಉದ್ದೇಶವನ್ನು ಅಮೆರಿಕ ಅಧ್ಯಕ್ಷ ಜೋ ಬಿಡನ್ ವ್ಯಕ್ತಪಡಿಸಿ, ನಾಮನಿರ್ದೇಶನ ಮಾಡಿದ್ದಾರೆ. ನ್ಯಾಯಾಂಗದ 10 ಉನ್ನತ ಸ್ಥಾನಗಳಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿದ್ದು, ಅದರಲ್ಲಿ ಭಾರತೀಯ-ಅಮೆರಿಕನ್, ಆಫ್ರಿಕನ್-ಅಮೆರಿಕನ್ ಮತ್ತು ಮುಸ್ಲಿಂ ಅಮೆರಿಕನ್ ಅಭ್ಯರ್ಥಿಗಳು ಇದ್ದಾರೆ. 10 ಫೆಡರಲ್ ಸರ್ಕ್ಯೂಟ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಹುದ್ದೆಗಳಿಗೆ ಮತ್ತು ಒಂದು ಕೊಲಂಬಿಯಾ ಜಿಲ್ಲೆಯ ಸುಪೀರಿಯರ್ ಕೋರ್ಟ್ ನ್ಯಾಯಾಧೀಶ ಹುದ್ದೆಗಳಿಗೆ ಅಭ್ಯರ್ಥಿಗಳನ್ನು …

Read More »

ಬೆಳಗಾವಿಯಲ್ಲಿ ರಾಜ್ಯ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘದಿಂದ ಇಂದು ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ, ಕೇಂದ್ರ ಸರಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಕಾರ್ಮಿಕರ ಕಾಯ್ದೆ ತಿದ್ದುಪಡಿ ಮತ್ತು ರೈತ ವಿರೋದಿ ಕಾಯ್ದೆಯನ್ನು ಕೈ ಬಿಟ್ಟು ಸರಕಾರ ರೈತಪರವಾದ ಮಸೂದೆ ಜಾರಿ ತರಲು ರಾಜ್ಯಸಂಘದ ರಾಜ್ಯ ಅಧ್ಯಕ್ಷ ಬಸವರಾಜ್ ಕರಿಗಾರ ಬೃಹತ್ ರೈತ ಸಮಾವೇಶದ ಮೂಲಕ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಬೆಳಗಾವಿ ಬೃಹತ್ ಪ್ರತಿಭಟೆಯಲ್ಲಿ ರಾಜ್ಯ …

Read More »

ರಮೇಶ್ ಜಾರಕಿಹೊಳಿ ಬಂಧನದ ವಿಚಾರ ಎಸ್‌ಐಟಿಗೆ ಬಿಟ್ಟಿದ್ದು.- ಬೊಮ್ಮಾಯಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಎಸ್‌ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆ, ಟ್ವಿಟ್, ಟೀಕೆಗಳು ಯಾವುದೂ ಎಸ್ ಐಟಿ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲ. ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ ಐಟಿ ನಿರ್ಧರಿಸುತ್ತದೆ. ಕಾನೂನು ಮತ್ತು ಗೃಹ ಸಚಿವನಾದರೂ ಎಸ್ ಐಟಿ ತನಿಖೆ ವಿಷಯದಲ್ಲಿ …

Read More »

ಬೆಂಗಳೂರಿನ IFSMN ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ಶ್ರೀ ಡಿ ಬಿ ವಿಜಯಶಂಕರ್ ಆಯ್ಕೆ

ಬೆಂಗಳೂರು: ಇದೆ ತಿಂಗಳ ಮಾರ್ಚ್ ೨೮ ರಂದು ಬೆಂಗಳೂರಿನ ಗಾಂಧಿ ಭವಣದಲ್ಲಿ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ ಬೆಂಗಳೂರು ( IFSMN) ಇದರ ರಾಜ್ಯ ಉಪಾಧ್ಯಕ್ಷರಾಗಿ ಶ್ರೀ ಡಿ,ಬಿ,ವಿಜಯಶಂಕರ್ ಅವರು ಅಧಿಕೃತ ಅಧಿಕಾರವನ್ನು ರಾಷ್ಟ್ರೀಯ ಅಧ್ಯಕ್ಷ ಶ್ರೀ ಬಿ,ಜೆ,ವಿಜಯ್ ಹಾಗೂ ರಾಜ್ಯ ಅಧ್ಯಕ್ಷ ಶ್ರೀ ಜಿ,ರಮೇಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿಸೋಜಾ ಅವರ ನೆತ್ರುತ್ವದಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯದಲ್ಲಿ ಹೆಚ್ಚುತ್ಯಿರುವ ಪತ್ರಕರ್ತರ ಸಂಖ್ಯೆ ಹಾಗೂ ಅನೇಕ …

Read More »

ಕೋರ್ಟ್‌ಗೆ ಬರುವ ವೇಳೆ ಸಿ.ಡಿ ಯುವತಿ ಜೊತೆ ಕೆಪಿಸಿಸಿ ಕಾರ್ಯದರ್ಶಿ ಪ್ರತ್ಯಕ್ಷ, ನಲಪಾಡ್ ಕಾರು ಬೆಂಗಾವಲು?

ಬೆಂಗಳೂರು: ನ್ಯಾಯಾಲಯದಲ್ಲಿ ಯುವತಿಯನ್ನು ಹಾಜರುಪಡಿಸಿದ ವೇಳೆ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಇರುವುದು ಬೆಳಕಿಗೆ ಬಂದಿದೆ. ಯುವತಿ ಕಾರು ಹತ್ತುವ ಸಂದರ್ಭದಲ್ಲಿ ಮುಕುಂದರಾಜ್ ಯುವತಿ ಕಾರು ಹತ್ತುವಾಗ ಕಾರಿನ ಬಾಗಿಲ ಬಳಿಗೆ ಬರುವುದು ವಿಡಿಯೊವೊಂದರಲ್ಲಿ ಸೆರೆಯಾಗಿದೆ. ಇದನ್ನು ಬಿಜೆಪಿ ಕರ್ನಾಟಕ ಪ್ರಶ್ನಿಸಿ ದ್ವೀಟ್ ಮಾಡಿದೆ. ಬಿಜೆಪಿ ಕರ್ನಾಟಕ ಟೈಟ್: ‘ಸಿ.ಡಿ ಪ್ರಕರಣ ಕರ್ನಾಟಕ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ …

Read More »