Breaking News

vijay_shankar

ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪತ್ನಿ ಹಾಗೂ ಉಪಾಧ್ಯಕ್ಷರಾಗಿ ಪತಿ,

ರಾಜ್ಯದ ಪಂಚಾಯತ್ ರಾಜ್ ಇತಿಹಾಸದಲ್ಲೇ ಮೊದಲ ಬಾರಿಗೆ ಪತ್ನಿ-ಪತಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ. ಇಂಥದ್ದೊಂದು ಅಪರೂಪದ ಪ್ರಕರಣ ಹುಬ್ಬಳ್ಳಿ ತಾಲೂಕು ವರೂರ ಗ್ರಾಪಂನಲ್ಲಿ ನಡೆದಿದೆ. ಅಧ್ಯಕ್ಷೆಯಾಗಿ ಪತ್ನಿ ವಿಶಾಲಾಕ್ಷಿ ಚನ್ನಬಸಗೌಡ ಹನಮಂತಗೌಡರ, ಉಪಾಧ್ಯಕ್ಷರಾಗಿ ಪತಿ ಚನ್ನಬಸಗೌಡ ಚನ್ನಬಸನಗೌಡರ ಅವಿರೋಧ ಆಯ್ಕೆಯಾಗಿದ್ದಾರೆ. ಇವರಿಬ್ಬರೂ ಮೊದಲ ಬಾರಿಗೆ ಗ್ರಾಪಂಗೆ ಚುನಾಯಿತರಾಗಿದ್ದಾರೆ ಎನ್ನುವುದು ಮತ್ತೊಂದು ವಿಶೇಷ. https://bayalubirugali.com/2021/02/03/petrol-diesel-prices-increasing-donkey-horsebacked-people/ ಅಧ್ಯಕ್ಷೆ ವಿಶಾಲಾಕ್ಷಿ ಪಂಚಾಯತ್‌ನ 1 ನೇ ವಾರ್ಡ್ …

Read More »

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ! ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ …

Read More »

ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಹರಿಯಾಣದ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ಪಕ್ಷದ ಕರ್ನಾಲ್ ಜಿಲ್ಲಾಧ್ಯಕ್ಷ ಇಂದರ್ಜಿತ್ ಸಿಂಗ್ ಗೋರಾಯ ಪಕ್ಷ ತೊರೆದಿದ್ದಾರೆ. ಈ ಕುರಿತು ಪಿಟಿಐ ವರದಿ ಮಾಡಿದೆ. ಜೆಜೆಪಿಯು ಹರಿಯಾಣದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. Haryana: JJP's Karnal district president Inderjit Singh Goraya quits the party in solidarity with #FarmersProtests over agri …

Read More »

ಎಂಎಲ್‌ಎ ಹೆಸರು ಹೇಳಿಕೊಂಡು ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಗನ್‌ಮ್ಯಾನ್ ಅಂದರ್!

ಬೆಂಗಳೂರು: ತಾನು ಉತ್ತರ ಕರ್ನಾಟಕ ಕಡೆಯ ಶಾಸಕರೊಬ್ಬರ ಗನ್‌ಮ್ಯಾನ್ ಎಂದು ಸುಳ್ಳು ಹೇಳಿಕೊಂಡು ಅಮಾಯಕರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದ ಯುವಕನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಸುಮಾರು ಮೂವತ್ತು ವರ್ಷ ವಯಸ್ಸಿನ ನಾರಾಯಣ ರಾಮಚಂದ್ರ ಹೆಗಡೆ ಎಂಬಾತನೇ ಬಂಧಿತ. ಈತ ಮೂಲತಃ ಉತ್ತರ ಕನ್ನಡ ಜಿಲ್ಲೆಯವನು. ಶಾಸಕರು-ಮಂತ್ರಿಗಳ ಗನ್‌ಮ್ಯಾನ್‌ಗಳಂತೆ ತಾನೂ ಸಫಾರಿ ಸೂಟ್ ಧರಿಸಿ ತಿರುಗಾಡುತ್ತಿದ್ದ. ಸೊಂಟದಲ್ಲಿ ಗನ್ ಪೌಚ್ ನೇತಾಡುತ್ತಿರುತ್ತಿತ್ತು. ಅದರಲ್ಲಿ ಒಂದು ನಕಲಿ ಗನ್ ಕೂಡ ಇಟ್ಟುಕೊಂಡಿರುತ್ತಿದ್ದ. ಇವನನ್ನು …

Read More »

ಸಿಬಿಎಸ್‌ಇ 10, 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ಮಂಗಳವಾರ 10 ಮತ್ತು 12ನೇ ತರಗತಿಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು cbse.nic.in ನಲ್ಲಿ ಲಭ್ಯವಿದೆ. ಪರೀಕ್ಷೆಯು ಆಫ್‌ಲೈನ್ ಲಿಖಿತ ಕ್ರಮದಲ್ಲಿ ನಡೆಯಲಿದ್ದು, ಪ್ರಶ್ನೆಪತ್ರಿಕೆಗಳು ಶೇ.33 ರಷ್ಟು ಆಂತರಿಕ ಆಯ್ಕೆ ಪ್ರಶ್ನೆಗಳನ್ನು ಹೊಂದಿರುತ್ತದೆ. ಪರೀಕ್ಷೆಯ ಪಠ್ಯಕ್ರಮವನ್ನು ಸಹ ಶೇ.30ರವರೆಗೆ ಕಡಿತಗೊಳಿಸಲಾಗಿದೆ. ಮೇ 4 ರಿಂದ ಜೂ.10 ರವರೆಗೆ ನಡೆಯಲಿರುವ ಪರೀಕ್ಷೆಗಳಲ್ಲಿ ಸುಮಾರು 30 ಲಕ್ಷ ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆ ಇದೆ. ಮಾ. 1 …

Read More »

ರಾಜಕಾರಣಿಗಳ ಸಂಬಂಧಿಕರಿಗೆ,60 ವರ್ಷ ಮೇಲ್ಪಟ್ಟವರಿಗೆ ಬಿಜೆಪಿ ಟಿಕೆಟ್ ಇಲ್ಲ!

ಗುಜರಾತ್​ನ ಬಿಜೆಪಿ ಘಟಕ ಸ್ಥಳೀಯ ಹಾಗೂ ನಾಗರಿಕ ಚುನಾವಣೆಯಲ್ಲಿ ಪಕ್ಷದಿಂದ ನೀಡಲಾಗುವ ಟಿಕೆಟ್​ನ್ನ ಪಡೆಯಬೇಕು ಅಂದರೆ ಕೆಲ ಮಾನದಂಡಗಳನ್ನ ವಿಧಿಸಿದೆ. ಇದರನ್ವಯ 60 ವರ್ಷಕ್ಕಿಂತ ಮೇಲ್ಪಟ್ಟವರು, ಮೂರು ಬಾರಿ ಚುನಾವಣೆಯಲ್ಲಿ ಆಯ್ಕೆಯಾದವರು ಹಾಗೂ ರಾಜಕಾರಣಿಗಳ ಸಂಬಂಧಿಗಳಿಗೆ ಬಿಜೆಪಿ ಟಿಕೆಟ್ ಸಿಗೋದಿಲ್ಲ ಎಂದು ಹೇಳಿದೆ. ಈ ಬಗ್ಗೆ ಸ್ವತಃ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅಧಿಕೃತ ಮಾಹಿತಿ ನೀಡಿದ್ದಾರೆ. ಮುಂಬರುವ ಮುನ್ಸಿಪಾಲ್ ಕಾರ್ಪೋರೇಷನ್ ಚುನಾವಣೆ ಸಂಬಂಧ ನಡೆಸಲಾದ ಸಭೆಯಲ್ಲಿ ಬಿಜೆಪಿ …

Read More »

ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ. ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ಪತ್ರಿಕಾ ಹೇಳಿಕೆ ನೀಡಿದ್ದು, ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಹೇಳಿಕೆಯಲ್ಲಿ “ಕರ್ನಾಟಕಕ್ಕೆ ಅನ್ಯಾಯದ ಸರಣಿ ಮುಂದುವರೆದಿದೆ, ಒಕ್ಕೂಟ ಸರ್ಕಾರದ 2021-22 ಬಜೆಟ್ ನಲ್ಲಿ ಕಳೆದ …

Read More »

ಪೆಟ್ರೋಲ್‌ , ಡೀಸೆಲ್‌ ಮೊಬೈಲ್ , ಮದ್ಯ , ವಾಹನಗಳ ಬಿಡಿಭಾಗಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು ದುಬಾರಿ

ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಬ್ಬಿಣ  ಸ್ಟೀಲ್   ನೈಲಾನ್ ಬಟ್ಟೆಗಳು  ತಾಮ್ರದ ಲೋಹಗಳು  ಕೃಷಿ ಪರಿಕರಗಳು ಬೆಲೆ ಇಳಿಕೆಯಾಗುತ್ತಿರುವ ವಸ್ತುಗಳು ಎಂದು ಘೋಷಿಸಿದ್ದಾರೆ. ನವದೆಹಲಿ 1 :  2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಮೂಲಸೌಕರ್ಯ ಕೃಷಿ ಸೆಸ್ ವಿಧಿಸಿದ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಪೆಟ್ರೋಲ್ ದರ 2.5 ರೂಪಾಯಿ ಹಾಗೂ ಡಿಸೇಲ್ ಪ್ರತಿ ಲೀಟರ್ಗೆ 4 ರೂಪಾಯಿ ಏರಿಕೆ ಮಾಡಲಾಗಿದೆ. ಕೃಷಿ …

Read More »

ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್‌ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು …

Read More »

ನೂತನ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀಮತಿ ಗೌರಮ್ಮ ಹನಮಂತ ಮುಳ್ಳೂರು ಅವರ ಪರವಾಗಿ ಅಭಿನಂದನೆ ಹೇಳಿದ ಮುತ್ತಣ್ಣ ಮುಳ್ಳೂರು, & ಹನಮಂತ,

ಮಾಜಿ ತಾಲ್ಲೂಕು ಪಂಚಾಯತ ಅಧ್ಯಕ್ಷರಾದ ಮುತ್ತಣ್ಣ ಮುಳ್ಳೂರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಗೌರಮ್ಮ ಹನಮಂತಪ್ಪ ಮುಳ್ಳೂರು ಅವರು ಆಯ್ಕೆಯಾದರು. 1983 ರಿಂದ ರಾಜ್ಯ ರಾಜಕೀಯ ರಂಗದಲ್ಲಿ ದಿಗ್ಗಜ ನಾಯಕರೊಂದಿಗೆ ಗುರುತಿಸಿಕೊಂಡ ಮುತ್ತಣ್ಣ ಮುಳ್ಳೂರು ಅವರ ಸಹೋದರ ಹನಮಂತ ಮುಳ್ಳೂರು ಅವರ ಧರ್ಮಪತ್ನಿ ಗೌರಮ್ಮ ಇಂದು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ನನ್ನೂರಿನ ಎಲ್ಲಾ ಗುರುಹಿರಿಯಗೆ ಪಕ್ಷದ ಕಾರ್ಯಕರ್ತರು ಹಾಗೂ …

Read More »