Breaking News

vijay_shankar

ನ್ಯಾಯಾಂಗ ನಿಂದನೆ ಪ್ರಕರಣ: ವಿಜಯ ಮಲ್ಯ ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂ

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಪುನರ್‌ಪರಿಶೀಲನಾ ಅರ್ಜಿ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ತಮ್ಮ ಮಕ್ಕಳಿಗೆ ₹295.415 ಕೋಟಿ(4ಕೋಟಿ ಡಾಲರ್‌) ವರ್ಗಾವಣೆ ಮಾಡಿದ ಪ್ರಕರಣದಲ್ಲಿ ವಿಜಯ ಮಲ್ಯ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು 2017ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪು ಪುನರ್‌ ಪರಿಶೀಲಿಸುವಂತೆ ಮಲ್ಯ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಯು.ಯು. ಲಲಿತ್‌ …

Read More »

ಟಿಕ್‌ಟಾಕ್ ಸಿಇಒ ಕೆವಿನ್ ಮೇಯರ್ ರಾಜೀನಾಮೆ

ವಾಷಿಂಗ್ಟನ್‌, ಆಗಸ್ಟ್ 27: ಚೀನಾದ ಕಿರು ವೀಡಿಯೋ ತಯಾರಿಕಾ ಆ್ಯಪ್ ಟಿಕ್‌ಟಾಕ್ ಆ್ಯಪ್ ನಿಷೇಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ ನಂತರ ಟಿಕ್ ಟಾಕ್ ಮುಖ್ಯಸ್ಥ ಕೆವಿನ್ ಮೇಯರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದ ಭದ್ರತೆಗೆ ಧಕ್ಕೆ ತರುತ್ತದೆ ಎಂಬ ವಿಚಾರವಾಗಿ 45 ದಿನಗಳಲ್ಲಿ ಟಿಕ್‌ಟಾಕ್ ಮಾರುವಂತೆ ವಾರ್ನಿಂಗ್ ಕೊಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಟಿಕ್‌ಟಾಕ್ ಮಾಲೀಕರಾದ ಬೈಟ್‌ಡ್ಯಾನ್ಸ್‌ಗೆ 90 ದಿನಗಳವರೆಗೆ ಮಾರಬೇಖು ಇಲ್ಲ ಬ್ಯಾನ್ ಎಂದು ಎಚ್ಚರಿಕೆ …

Read More »

ಬೆಂಗಳೂರು; ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು; ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು, ಆಗಸ್ಟ್ 27: ಬೆಂಗಳೂರು ನಗರದ 70 ವರ್ಷದ ವ್ಯಕ್ತಿ ಬರೆದ ಪತ್ರವನ್ನು ಪರಿಶೀಲನೆ ನಡೆಸಿದ ಕರ್ನಾಟಕ ಹೈಕೋರ್ಟ್ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಅಳಿಯ ಸಾವನ್ನಪ್ಪಿದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಅವರಿಗೆ ಬೆಂಗಳೂರಿನ ಕೋಮಲನಗರದ ನಿವಾಸಿಯೊಬ್ಬರು ಪತ್ರ ಬರೆದಿದ್ದರು. ‘ಪತ್ರದಲ್ಲಿ ಹೇಳಿರುವ ಅಂಶಗಳು ಸರಿಯಾಗಿದ್ದರೆ ಅದು ಅಘಾತಕಾರಿ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. …

Read More »

ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷ ಸೆ.1ರಿಂದ ಆರಂಭ

ಬೆಂಗಳೂರು ; ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಸಚಿವ ಡಾ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ …

Read More »

ಕುಷ್ಟಗಿ:ಸರ್ಕಾರಿ ಕಾರ್ಯಾಲಯದಲ್ಲಿ ಅಧಿಕಾರಿಯೊಬ್ಬ ಲವ್ವಿಡವ್ವಿ

ಕುಷ್ಟಗಿ :ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ. ಈ ಹಿಂದೆ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಗುರುಬಸವರಾಜ್ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದೆ. ಗುರುಬಸವರಾಜ ತಹಶೀಲ್ದಾರ್ ಆಗಿದ್ದಾಗ ತಮ್ಮ ಸಹೋದ್ಯೋಗಿ ಕಚೇರಿಯಲ್ಲಿ ಕಿಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಮ್ಮ ಕಚೇರಿಯಲ್ಲಿ ಬಂದು ನಿಂತಿದ್ದ ಮಹಿಳಾ ಸಿಬ್ಬಂದಿಯನ್ನು ಕಿಸ್ ಮಾಡಿ ಕಚೇರಿಯ ಘನತೆಯನ್ನ ಮಣ್ಣು ಪಾಲು ಮಾಡಿದ್ದಾರೆ ಎಂದು ಕೆಲ ಸಂಘಟನೆಗಳು ಆಕ್ರೋಶ …

Read More »

ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಲಿದ್ದಾರೆ ಸಿದ್ದರಾಮಯ್ಯ?

ಬೆಂಗಳೂರು, ಆಗಸ್ಟ್ 26: ಪ್ರತಿಪಕ್ಷ ನಾಯಕರು ಕೇಳಿರುವ ಯಾವುದೇ ಮಾಹಿತಿಯನ್ನು ಸರ್ಕಾರದ ಇಲಾಖೆಗಳು ನೀಡುತ್ತಿಲ್ಲ. ಆದ್ದರಿಂದ, ಮುಂಬರುವ ಅಧಿವೇಶನದಲ್ಲಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯ ಹಕ್ಕುಚ್ಯುತಿ ಮಂಡನೆ ಮಾಡುವ ಸಾಧ್ಯತೆ ಇದೆ. ಜಿಎಸ್‌ಟಿ, ಪ್ರವಾಹದ ಸಂದರ್ಭದಲ್ಲಿ ಬಿಡುಗಡೆಯಾದ ಹಣಕಾಸಿನ ವಿವರ. ಕೋವಿಡ್ 19 ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳಿಗೆ ಮಾಡಿರುವ ಖರ್ಚು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಿದ್ದರಾಮಯ್ಯ ಮಾಹಿತಿ ಕೇಳಿದ್ದಾರೆ. ಜೂನ್‌ನಿಂದ ಆಗಸ್ಟ್ ತನಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಮಾಹಿತಿ ಕೇಳಿ …

Read More »

ಅಂಬೇಡ್ಕರ್ ನಿಗಮ ಮಂಡಳಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಕಟ್ಟಿಮನಿ ಅವರಿಗೆ ಗೌರವ ಸನ್ಮಾನ

ಬಾಗಲಕೋಟ : ಜಿಲ್ಲೆಯ ಡಾ|| ಬಿ ಆರ್ ಅಂಬೇಡ್ಕರ್ ನಿಗಮ ಮಂಡಳಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ,ಮಲ್ಲಿಕಾರ್ಜುನ ಕಟ್ಟಿಮನಿ ಅವರಿಗೆ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದ ಪರಶುರಾಮ ರತ್ನಾಕರ ಹಾಗೂ ಗಂಗಾದರ ಎನ್, ಮಾದರ ಮತ್ತು ಸಮಾಜ ಪರವಾಗಿ ನೂತನ ಅಧಿಕಾರಿಗೆ ಸನ್ಮಾನಿಸಿ ಇಲಾಖೆಯ ಹತ್ತು ಹಲವಾರು ಯೋಜನೆಗಳು ಉಳ್ಳವರ ಪಾಲಾಗುತ್ತಿದ್ದು ಪ್ರಾಮಾಣಿಕ ನೈಜ ಪಲಾನುಭವಿಗಳಿಗೆ ಸಾಲಿನಲ್ಲಿ ಸ್ವಾಲಭ್ಯಗಳು ಸಿಗುತ್ತಿಲ್ಲಾ, ಮಾನ್ಯರು ಪಕ್ಷಾತಿತವಾಗಿ ಜಾತ್ಯಾತೀತವಾಗಿ ಅರ್ಹ ಪಲಾನುಭವಿಗಳನ್ನು …

Read More »

ಮಗುವನ್ನು ಏಕಾಂಗಿಯಾಗಿ ಬಿಟ್ಟು ಬಾಯ್ಫ್ರೆಂಡ್ ನೋಡಲು ಹೋದ ಮಹಿಳೆಗೆ ಕಾದಿತ್ತು ಶಾಕ್!

ಲಂಡನ್​: ಮಗುವನ್ನು ಬಿಟ್ಟು ಜೈಲಿನಲ್ಲಿದ್ದ ತನ್ನ ಬಾಯ್​ಫ್ರೆಂಡ್​ ನೋಡಲು ಹೋಗಿದ್ದ ಮಹಿಳೆ ಇದೀಗ ಶಿಕ್ಷೆಗೆ ಗುರಿಯಾಗುವ ಭೀತಿಯಲ್ಲಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾಳೆ. ಕಳೆದ ವರ್ಷ ಡಿಸೆಂಬರ್ 30ರಲ್ಲಿ ಈ ಘಟನೆ ನಡೆದಿತ್ತು. ಜೈಲು ವಾಸಿಯಾಗಿದ್ದ ತನ್ನ ಬಾಯ್ಫ್ರೆಂಡ್ನನ್ನು ನೋಡಲು ಮಗುವನ್ನು ಫ್ಲ್ಯಾಟ್ನಲ್ಲೇ ಬಿಟ್ಟು ಹೋಗಿದ್ದಳು. ಈ ವೇಳೆ ಮಗು ಫ್ಲ್ಯಾಟ್ನಿಂದ ಆಚೆ ಬಂದು ಜನರಿರುವ ಪ್ರದೇಶದಲ್ಲಿ ಏಕಾಂಗಿಯಾಗಿ ತೆವಳುವುದನ್ನು ನೋಡಿ ಹೌಸಿಂಗ್ ಆಫೀಸರ್ ನೋಡಿ ಮಗುವನ್ನು ಎತ್ತಿಕೊಂಡಿದ್ದರು. ಮಹಿಳೆಯ ಹೆಸರು ಎಬ್ಟಿಸ್ಸಮ್​ …

Read More »

ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದ ಯುವತಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ಲು!

ಮೈಸೂರು: ಸ್ನೇಹಿತೆಯ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಆಕೆಯ ಮನೆಗೆ ಬಂದ ಯುವತಿ ಅಲ್ಲೇ ಉಂಡುತಿಂದು ಬಳಿಕ ಮಾಡಬಾರದ್ದನ್ನು ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಆ.23ರಂದು ಕುಂಬಾರಕೊಪ್ಪಲು ನಿವಾಸಿ ರಮೇಶ್ ಅವರ ಮಗಳ ಮದುವೆ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥದ ವೇಳೆ ಮಗಳು ಚಿನ್ನಾಭರಣ ಧರಿಸಿದ್ದಳು. ಕಾರ್ಯಕ್ರಮ ಮುಗಿದ ನಂತರ ಒಡವೆಗಳನ್ನು ಬಿಚ್ಚಿ ಅಲ್ಟ್ರಾದಲ್ಲಿ ಇಟ್ಟಿದ್ದಳು. ಅದೇ ದಿನ ಸಂಜೆ ಸಂಬಂಧಿಕರೆಲ್ಲ ಮನೆಯಿಂದ ಹೋದ ಮೇಲೆ ಒಡವೆಗಳು ಕಾಣೆಯಾಗಿದ್ದವು. ಮನೆಯಲ್ಲಿ ಚಿನ್ನಾಭರಣ ಕಾಣೆಯಾದ ಬಗ್ಗೆ …

Read More »

ಡಿಸಿಎಂ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು, ಬೇಡಿಕೆಗೆ ಮಣಿಯುತ್ತಾ ಹೈಕಮಾಂಡ್ ?

ಉಪಮುಖ್ಯಮಂತ್ರಿ ಸ್ಥಾನಕ್ಕೆ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಗೆ ತೆರಳಿ ಒಂದು ಸುತ್ತಿನ ಮಾತುಕತೆ ನಡೆಸಿರುವ ಅವರು ಮತ್ತೊಮ್ಮೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಗೊಂದಲದ ನಡುವೆ ಡಿಸಿಎಂ ಸ್ಥಾನಕ್ಕಾಗಿ ಪೈಪೋಟಿಯೂ ತೀವ್ರಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಮೂವರು ಡಿಸಿಎಂಗಳಿದ್ದು ಈ ನಡುವೆ ರಮೇಶ್ ಜಾರಕಿಹೊಳಿ ಕೂಡಾ ಉಪಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಕುರ್ಚಿ ಪಡೆದುಕೊಳ್ಳಲು ಹೈಕಮಾಂಡ್‌ ಮಟ್ಟದಲ್ಲೇ ರಮೇಶ್ …

Read More »