ಕೊಪ್ಪಳ, ಸೆ.11: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ರೈತರು ಶೇ. 100 ಕ್ಕಿಂತಲು ಹೆಚ್ಚು ಭಿತ್ತನೆ ಮಾಡಿದ್ದಾರೆ ಹಾಗಾಗಿ ಈ ವರ್ಷ ಭಗವಂತನ ಕೃಪೆಯಿಂದ ರೈತರು ಉತ್ತಮ ಫಸಲು ಪಡೆಯುತ್ತಾರೆ ಎಂದು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದರು.ಅವರು ಶುಕ್ರವಾರ ಯಲಬುರ್ಗಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್ಗಳ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಿ ಮಾತನಾಡಿದರು. …
Read More »ಕರೋನಾಗೆ ಬಲಿಯಾದ ಭಾರತ ರತ್ನ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಿಧಿವಶ
ಕೊರೋನಾಗೆ ಬಲಿಯಾದ ಭಾರತ ರತ್ನ …!!-ಮಾಜಿ ರಾಷ್ಟಪತಿ ಪ್ರಣBayalubirugali News ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಮೆದುಳು ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದು ಸೋಮವಾರ ಪ್ರಣವ್ ಮುಖರ್ಜಿ ಆಪ್ತ ವಲಯ ಹಾಗೂ ಆಸ್ಪತ್ರೆ ಮೂಲಗಳು ತಿಳಿಸಿವೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸೋಮವಾರ ಆರೋಗ್ಯ ತಪಾಸಣೆಗಾಗಿ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಗೆ ಭೇಟಿ …
Read More »ನಿಗದಿತ ಅವಧಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ. 2020-08-30 comments 18:03
Bayalubirugali News.AUG.30:- ಈಗಾಗಲೇ ಅಧಿಕಾರಾವಧಿ ಮುಗಿದಿರುವ ಗ್ರಾಮ ಪಂಚಾಯ್ತಿಗಳಿಗೂ ಡಿಸೆಂಬರ್‍ನಲ್ಲಿ ಚುನಾವಣೆ ಘೋಷಣೆಯಾಗಲಿದೆ. ನಿಗದಿತ ಸಮಯದಲ್ಲೇ ಚುನಾವಣೆ ನಡೆಸುವುದಾಗಿ ಆಯೋಗ ಮುಂದಾಗಿರುವುದರಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸುಮಾರು ಆರು ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಪಕ್ಷಗಳಿಗೆ ಈ ಚುನಾವಣೆ ಕೂಡ ಸವಾಲಾಗಿ ಪರಿಣಮಿಸಲಿದೆ. ಸರ್ಕಾರದ ಸಾಧನೆಗಳ ಮೇಲೆ ಬಿಜೆಪಿ ಚುನಾವಣೆಗೆ ಹೋದರೆ, ಪ್ರತಿಪಕ್ಷಗಳು ಸರ್ಕಾರದ ವೈಫಲ್ಯಗಳಿಗೆ ಚುನಾವಣಾ ಅಸ್ತ್ರ ಎನ್ನುತ್ತಿವೆ. ಕೋವಿಡ್-19 …
Read More »ಕೋವಿಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ.ಗಳ ಹಗರಣ : ಡಾ। ಪುಷ್ಪ ಅಮರನಾಥ
ಮೊಳಕಾಲ್ಮುರು : ತಾಲೂಕಿನ ಹಾನಗಲ್ ಗ್ರಾಮದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೋವಿಡ್ ಹೆಸರಲ್ಲಿ ಈಗಾಗಲೇ ರಾಜ್ಯದಲ್ಲಿ ಕೋವಿಡ್ -19 ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಾವಿರಾರುಕೋಟಿ ರೂ.ಗಳ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ। ಪುಷ್ಪ ಅಮರನಾಥ ಅವರುಆರೋಪಿಸಿದರು. ಕೊರೊನಾ ಪರೀಕ್ಷೆ ಪಿಪಿಇ ಸೀಲ್ ಡೌನ್ ನೆಪದಲ್ಲಿ ಲೂಟಿ ಮಾಡಲಾಗುತ್ತಿದೆ. ಪಿ.ಪಿ.ಇ, ಕಿಟ್ ಗಳ ಖರೀದಿ ಹಾಗೂ ಜನರ ಹೆಸರಲ್ಲಿ …
Read More »ಸಿಂದಗಿಯಲ್ಲಿ ದಲಿತ ಯುವಕನ ಹತ್ಯೆ ಮನುಷ್ಯರು ತಲೆತಗ್ಗಿಸುವಂತಹ ಕೃತ್ಯ: ಸಿದ್ದರಾಮಯ್ಯ
ಬೆಂಗಳೂರು : ವಿಜಯಪುರ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದದ್ದು, ಮನುಷ್ಯರೆಲ್ಲರೂ ತಲೆ ತಗ್ಗಿಸುವಂತಹದ್ದಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ఆలి ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವವರಿಗೆ ಹಾಗೂ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಸಮಾಜದಲ್ಲಿ ಸಿಗುತ್ತಿರುವ ಬೆಂಬಲವೇ ಇಂತಹ ಕೃತ್ಯಗಳು ನಡೆಯುವುದಕ್ಕೆ ಕಾರಣವಾಗುತ್ತವೆ ಎಂದು ಅಭಿಪ್ರಾಯಿಸಿದ್ದಾರೆ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆ ಕುತಂತ್ರಗಳು ಹೆಚ್ಚಾಗುತ್ತಿರುವುದರಿಂದ ದಲಿತರ ಮೇಲೆ …
Read More »ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಲಿದ್ದಾರೆ ಸಿದ್ದರಾಮಯ್ಯ?
ಬೆಂಗಳೂರು, ಆಗಸ್ಟ್ 26: ಪ್ರತಿಪಕ್ಷ ನಾಯಕರು ಕೇಳಿರುವ ಯಾವುದೇ ಮಾಹಿತಿಯನ್ನು ಸರ್ಕಾರದ ಇಲಾಖೆಗಳು ನೀಡುತ್ತಿಲ್ಲ. ಆದ್ದರಿಂದ, ಮುಂಬರುವ ಅಧಿವೇಶನದಲ್ಲಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯ ಹಕ್ಕುಚ್ಯುತಿ ಮಂಡನೆ ಮಾಡುವ ಸಾಧ್ಯತೆ ಇದೆ. ಜಿಎಸ್‌ಟಿ, ಪ್ರವಾಹದ ಸಂದರ್ಭದಲ್ಲಿ ಬಿಡುಗಡೆಯಾದ ಹಣಕಾಸಿನ ವಿವರ. ಕೋವಿಡ್ 19 ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳಿಗೆ ಮಾಡಿರುವ ಖರ್ಚು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಿದ್ದರಾಮಯ್ಯ ಮಾಹಿತಿ ಕೇಳಿದ್ದಾರೆ. ಜೂನ್‌ನಿಂದ ಆಗಸ್ಟ್ ತನಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಮಾಹಿತಿ ಕೇಳಿ …
Read More »ಡಿಸಿಎಂ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು, ಬೇಡಿಕೆಗೆ ಮಣಿಯುತ್ತಾ ಹೈಕಮಾಂಡ್ ?
ಉಪಮುಖ್ಯಮಂತ್ರಿ ಸ್ಥಾನಕ್ಕೆ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಗೆ ತೆರಳಿ ಒಂದು ಸುತ್ತಿನ ಮಾತುಕತೆ ನಡೆಸಿರುವ ಅವರು ಮತ್ತೊಮ್ಮೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಗೊಂದಲದ ನಡುವೆ ಡಿಸಿಎಂ ಸ್ಥಾನಕ್ಕಾಗಿ ಪೈಪೋಟಿಯೂ ತೀವ್ರಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಮೂವರು ಡಿಸಿಎಂಗಳಿದ್ದು ಈ ನಡುವೆ ರಮೇಶ್ ಜಾರಕಿಹೊಳಿ ಕೂಡಾ ಉಪಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಕುರ್ಚಿ ಪಡೆದುಕೊಳ್ಳಲು ಹೈಕಮಾಂಡ್ ಮಟ್ಟದಲ್ಲೇ ರಮೇಶ್ …
Read More »ಪರಿಹಾರಕ್ಕಾಗಿ ಕೇಂದ್ರದ ಮೊರೆ; ಪ್ರವಾಹ ಹಾನಿ ಸಮಗ್ರ ವರದಿ ಶೀಘ್ರ ಸಲ್ಲಿಕೆ: ಸಿಎಂ BSY
ಬೆಳಗಾವಿ/ಬಾಗಲಕೋಟೆ/ವಿಜಯಪುರ: ಕಳೆದ ವರ್ಷದ ಪ್ರವಾಹ ಸ್ಥಿತಿಯ ಕಹಿನೆನಪು ಮಾಸುವ ಮುನ್ನವೇ ಮತ್ತೂಂದು ಪ್ರವಾಹ ಎದುರಿಸಿರುವ ಉತ್ತರ ಕರ್ನಾಟಕದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂಕಷ್ಟ ಎದುರಿಸುತ್ತಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮಂಗಳವಾರ ಅವರು ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ, ದೂಧ್‌ಗಂಗಾ ನದಿಗಳ ಆರ್ಭಟಕ್ಕೆ ಕೊಚ್ಚಿಹೋದ ಬದುಕಿನ ಪರಿಶೀಲನೆ ನಡೆಸಿದರು. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದರು. ಹಾನಿಯ ಸಮಗ್ರ ವರದಿಯನ್ನು …
Read More »ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ
ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …
Read More »ಜಮ್ಮು ಕಾಶ್ಮೀರದಲ್ಲಿ ಆರು ರಾಜಕೀಯ ಪಕ್ಷಗಳ ಮೈತ್ರಿ: ಏನಿದು ಹೊಸ ಬೆಳವಣಿಗೆ?
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಸುದ್ದಿಯಾಗುತ್ತಿದೆ. ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದ ಆರು ರಾಜಕೀಯ ಪಕ್ಷಗಳು ಮೈತ್ರಿಗೆ ಮುಂದಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡಬೇಕು. ಇದರೊಂದಿಗೆ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ರಾಜಕೀಯ ಮಹಾ ಮೈತ್ರಿಯ ಹಿಂದಿನ ಉದ್ದೇಶವಾಗಿದೆ ಎಂದು ವರದಿಯಾಗಿದೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಪಕ್ಷಗಳು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News