Breaking News

Uncategorized

ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಯಾದಗಿರಿ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ‌ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಅಥವಾ ಆಫ್‍ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಕಿರುಸಾಲ / ಸ್ವಸಹಾಯ ಗುಂಪುಗಳಿಗೆ ಸಹಾಯ ಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ್ಯಾಭಿವೃದ್ಧಿ/ಉದ್ಯಮಶೀಲತಾ ತರಬೇತಿ‌ಯೋಜನೆಗಳಿಗೆ ಪ್ರವರ್ಗ-1ರ …

Read More »

ಮಂಡ್ಯ: ಅತ್ಯಾಚಾರವೆಸಗಿದ ಯುವಕನನ್ನು ಕೊಂದ ಬಾಲಕಿಯ ಪೋಷಕರು.

ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಯುವಕನನ್ನು ಆಕೆಯ ಪೋಷಕರು ಹೊಡೆದು ಕೊಂದ ಘಟನೆ ಮಂಡ್ಯದ ಎಸ್.ಐ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಭೈರಪ್ಪ(30) ಮೃತಪಟ್ಟ ಯುವಕ. ಈತ 7 ವರ್ಷದ ಬಾಲಕಿಯೊಬ್ಬಳಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರ ತಿಳಿದು ರೊಚ್ಚಿಗೆದ್ದ ಆಕೆಯ ಪೋಷಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನಪ್ಪಿದ್ದಾನೆ. ಈ …

Read More »

ವಿಶಾಖಪಟ್ಟಣದಲ್ಲಿ ಕ್ರೇನ್ ಕುಸಿತ, 11 ಮಂದಿ ಸಾವು.

ವಿಶಾಖಪಟ್ಟಣ:- ಆಂಧ್ರಪ್ರದೇಶದ ವಿಶಾಖಪಟ್ಟಣದ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ಕ್ರೇನ್ ಕುಸಿದು ಭಾರಿ ದುರ್ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿಶಾಖಪಟ್ಟಣದ ಬಂದರಿನ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ನೂತನ ಕ್ರೇನ್ ಅನ್ನು ನಿಲ್ಲಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕ್ರೇನ್ 70 ಟನ್ ತೂಕವಿದೆ. ಕ್ರೇನ್ ಕುಸಿದು …

Read More »

ನಿರ್ಗಮಿತ ಪೊಲೀಸ್ ಕಮಿಷನರ್ ವೈರ್ ಲೆಸ್ ಮೂಲಕ ಹಾರೈಕೆ.

ಬೆಂಗಳೂರು:- ಸಿಎಎ ಮತ್ತು ಎನ್​ಆರ್​ಸಿ ಪ್ರತಿಭಟನೆ ವೇಳೆ ಸಾಕಷ್ಟು ಶ್ರಮ ವಹಿಸಿದ್ದೀರಿ ಎಂದು ಬೆಂಗಳೂರು ನಗರ ನಿರ್ಗಮಿತ ಪೊಲೀಸ್​ ಕಮೀಷನ್​ ಭಾಸ್ಕರ್ ರಾವ್ ಅವರು ಹೇಳಿದರು. ನಗರದಲ್ಲಿ ವೈರ್​ಲೆಸ್ ಮೂಲಕ ಪೊಲೀಸ್​ ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪ್ರಯತ್ನ ಪಟ್ಟಿದ್ದೀರಿ ನಂತರ ಕೊರೊನಾ ವೇಳೆ ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ಶ್ರಮ ಹಾಕಿದ್ದೀರಿ. ಸೋಂಕು ತಗುಲಿದ ವೇಳೆ ನೀವು ದಕ್ಷವಾಗಿ ಕೆಲಸ …

Read More »

ಅಯೋಧ್ಯೆ: ಮೋದಿಯವರು ಪ್ರತಿಷ್ಠಾನ ಮಾಡಲಿರುವ ಬೆಳ್ಳಿ ಇಟ್ಟಿಗೆ.

ರಾಮಜನ್ಮಭೂಮಿಯನ್ನು ವಿಶ್ವದ ಗಮನ ಸೆಳೆಯುವಂತೆ ರೂಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಗಸ್ಟ್ 5ರ ಭೂಮಿಪೂಜೆ ಸಮಾರಂಭದ ವೇಳೆ 326 ಕೋಟಿ ರೂ. ವೆಚ್ಚದಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ವಿವಿಧ ನಿರ್ಮಾಣ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ.ಭೂಮಿಪೂಜೆ ಬಳಿಕ ಮಂದಿರ ನಿರ್ಮಾಣ ಸೇರಿದಂತೆ ಸುತ್ತಮುತ್ತಲಿನ 57 ಎಕರೆಗಳಲ್ಲಿ ರಾಮ ದೇಗುಲ ಸಂಕೀರ್ಣ, ರಾಮ್‌ಕಥಾ ಪುಂಜ್‌ ಪಾರ್ಕ್‌ ನಿರ್ಮಾಣಗೊಳ್ಳಲಿವೆ. ನಕ್ಷತ್ರ ವಾಟಿಕಾ, ಮ್ಯೂಸಿಯಂ, ದೇಶದ ಅತಿ ದೊಡ್ಡ ಧಾರ್ಮಿಕ ಗ್ರಂಥಾಲಯ ಸೇರಿದಂತೆ …

Read More »

ವಿಜಯಪುರ : ಇಲ್ಲಿಯವರೆಗೆ ೨೧೮೪ ಗುಣಮುಖರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ -ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್

ವಿಜಯಪುರ : ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೨೧೮೪ ಗುಣಮುಖರೋಗಿಗಳನ್ನು ಬಿಡುಗಡೆಗೊಳಿಸಲಾಗಿದ್ದು, ಆಸ್ಪತ್ರೆಯಲ್ಲಿ ಸದ್ಯ ೯೧೨ ಕೋವಿಡ್ -೧೯ ಪಾಸಿಟಿವ್ ಸಕ್ರಿಯ ರೋಗಿಗಳಿದ್ದು, ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ. ಒಟ್ಟು ೩೬ ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಅವರು ತಿಳಿಸಿದ್ದಾರೆ.ಅದರಂತೆ ಜಿಲ್ಲೆಯ ವಿಜಯಪುರ ನಗರದಲ್ಲಿ ೨೦೨೨, ಬ.ಬಾಗೇವಾಡಿಯಲ್ಲಿ ೧೮೭, ಬಬಲೇಶ್ವರದಲ್ಲಿ ೫೨, ಚಡಚಣದಲ್ಲಿ ೩೦, ದೇ.ಹಿಪ್ಪರಗಿಯಲ್ಲಿ ೫೬, ಇಂಡಿಯಲ್ಲಿ ೧೫೯, ಕೋಲ್ಹಾರದಲ್ಲಿ ೩೮, ಮುದ್ದೇಬಿಹಾಳದಲ್ಲಿ ೧೪೮, ನಿಡಗುಂದಿಯಲ್ಲಿ ೩೫, ಸಿಂದಗಿಯಲ್ಲಿ ೧೬೫, …

Read More »

ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವನೆ; ಮೃತರ ಸಂಖ್ಯೆ 98ಕ್ಕೆ ಏರಿಕೆ

ಚಂಡೀಗಡ: ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ಭಾನುವಾರ 98ಕ್ಕೆ ಏರಿಕೆಯಾಗಿದೆ.‘ಹೊಸ ಹನ್ನೆರಡು ಮೃತ ಪ್ರಕರಣಗಳು ತರ್ನ್‌ ಟರಾನ್‌ ಜಿಲ್ಲೆಯಲ್ಲಿ ವರದಿಯಾಗಿವೆ. ಈವರೆಗೆ ಈ ಜಿಲ್ಲೆಯಲ್ಲಿ ಎಪ್ಪತ್ತೈದು ಮಂದಿ ಮೃತರಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಕುಲ್ವಂತ್‌ ಸಿಂಗ್‌ ತಿಳಿಸಿದ್ದಾರೆ.‘ಮೃತರ ಕುಟುಂಬದವರು ಹೇಳಿಕೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸುವುದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪಡೆದ ಮಾಹಿತಿಯಿಂದಾಗಿ ಎಪ್ಪತ್ತೈದು ಮಂದಿ ಮೃತರಾಗಿರುವುದು ತಿಳಿದುಬಂದಿದೆ. …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು

ಹೊಸದಿಲ್ಲಿ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.ಈ ಕುರಿತು ಟ್ವೀಟ್ ರನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೊನಾ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿಪಾಸಿಟಿವ್ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

Read More »

ಪ,ಪೊ,ದಿ,ಡಾ|| ಮಹಾಂತ ಸ್ವಾಮೀಜಿ ಸ್ಮರಣೆ,,,

ಬಾಗಲಕೋಟೆ ಜಿಲ್ಲೆ, ಹುನಗುಂದ ತಾಲೂಕು ಇಳಕಲ್‌ನ ವಿಜಯ ಮಹಾಂತೇಶ ಪೀಠದಡಾ|| ಮಹಾಂತ ಸ್ವಾಮೀಜಿ ಸ್ಮರಣೆ..ಮಹಾಂತ ಜೋಳಿಗೆ ಸ್ವಾಮೀಜಿ ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀಗಳ ಜನ್ಮದಿನವನ್ನು ಘನ ಕರ್ನಾಟಕ ರಾಜ್ಯ ಸರಕಾರ “ವ್ಯಸನಮುಕ್ತ ದಿನ” ಎಂದು ಘೋಷಿಸಿತ್ತು.ಮಠಾಧೀಶರಾಗಿದ್ದ ಅವರು ಜನರ ದುಶ್ಚಟಗಳನ್ನು ದೂರವಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದರು. ಸಾವಿರಾರು ಜನರು ಸ್ವಾಮೀಜಿಯವರಿಂದ ಪ್ರೇರಿತರಾಗಿ ದುಶ್ಚಟ ಬಿಟ್ಟಿದ್ದರು.ದುಶ್ಚಟಗಳನ್ನೇ ಭಿಕ್ಷೆ ಕೇಳಿದರು: ‘ಮಹಾಂತ ಜೋಳಿಗೆ’ ಎಂಬ ವಿಶಿಷ್ಟ ಪರಿಕಲ್ಪನೆ ಮೂಲಕ ದೇಶ …

Read More »

ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ; ಸೋಂಕಿತರ ಸಂಖ್ಯೆ 1.77 ಕೋಟಿಗೆ ಏರಿಕೆ

ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ವಿಶ್ವದಾದ್ಯಂತ 1,77,59,332 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ.ವಿಶ್ವದಾದ್ಯಂತ ಕೊರೊನಾ ಮಹಾಮಾರಿಗೆ ಈವರೆಗೆ 1,04,84,442 ಮಂದಿ ಗುಣಮುಖರಾಗಿದ್ದು, 6,82,855 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ವಿಶ್ವದಲ್ಲಿಯೇ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಅಮೆರಿಕಾದಲ್ಲಿ ಈವರೆಗೆ 46,17,494 ಮಂದಿಗೆ ಸೋಂಕು ತಗುಲಿದ್ದು, ಇದರಲ್ಲಿ 14,61,885 ಸೋಂಕಿತರು ಗುಣಮುಖರಾಗಿದ್ದು, 1,54,319 ಮಂದಿ ಮೃತಪಟ್ಟಿದ್ದಾರೆ. ಬ್ರೆಜಿಲ್ ನಲ್ಲಿ ಈವರೆಗೆ 27,07,877 ಮಂದಿಗೆ ಸೋಂಕು ತಗುಲಿದ್ದು, 20,37,982 …

Read More »