Breaking News

ನಟಿ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳ ದಿಢೀರ್ ದಾಳಿ!

ಬೆಂಗಳೂರು: ಮಾದಕ ಜಾಲಕ್ಕೆ ಸ್ಯಾಂಡಲ್​ವುಡ್​ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿ ಸಿಸಿಬಿ ಅಧಿಕಾರಿಗಳು ಶಾಕ್​ ನೀಡಿದ್ದಾರೆ.

ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್​ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿದೆ. ಡ್ರಗ್ಸ್ ದಂಧೆಯಲ್ಲಿ ಸಂಜನಾ ಹೆಸರು ಕೇಳಿಬರುತ್ತಿದ್ದು, ಈಗಾಗಲೇ ಆಪ್ತ ರಾಹುಲ್​ ಸಿಸಿಬಿ ಬಲೆಯಲ್ಲಿ ಸಿಕ್ಕಿಬಿದ್ದಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.

ಸಂಜನಾ ಆಪ್ತ ರಾಹುಲ್ ಹೇಳಿಕೆ‌ ಆಧಾರದ ಮೇಲೆ ದಾಳಿ ಮಾಡಲಾಗಿದೆ. ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆಯಲ್ಲಿ ತೊಡಗಿದ್ದು, ಸಂಜನಾ ಮನೆಯಲ್ಲಿ ಇದ್ದಾರೆಂದು ಮಾಹಿತಿ ತಿಳಿದುಬಂದಿದೆ.

About vijay_shankar

Check Also

test

test

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.