ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 136 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5368ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 136 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
#karnatakacoronaupdate Fresh #COVIDー19 positive cases in State in last 24h: 8960 with 136 deaths. B'lore recorded 2721 new cases and 41 deaths. Total discharges in State is 7464 incl 2148 in Blore @Sundaramchitra2 @scooban @rameshraop @dr_asr @raghukoppar (1/2)
— S. Lalitha (@Lolita_TNIE) August 28, 2020
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2721 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 8960 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,18,752ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು 3,18,752 ಪ್ರಕರಣಗಳ ಪೈಕಿ 2,27,019 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ. 86, 346 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.