ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಆದರೂ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಈ ಕುರಿತಂತೆ ಮಾತನಾಡಿದ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರತಿದಿನ 7ರಿಂದ 8 ಲಕ್ಷ ಕೊರೋನಾ ವೈರಸ್ ಪರೀಕ್ಷೆ ಮಾಡುತ್ತಿದ್ದರೂ ಕೂಡ ಪಾಸಿಟಿವ್ ರೋಗಿಗಳ ಸಂಖ್ಯೆ ಕಳೆದ ನಾಲ್ಕೈದು ದಿನಗಳಲ್ಲಿ ಶೇಕಡಾ 10.3ರಿಂದ ಶೇಕಡಾ 7.72ಕ್ಕೆ ಇಳಿದಿದೆ. ಆಗಸ್ಟ್ 13ರಿಂದ ಪ್ರತಿದಿನ ಹೊಸ ಕೊರೋನಾ ಸೋಂಕಿತರ ಸಂಖ್ಯೆ 64 ಸಾವಿರದಿಂದ 55 ಸಾವಿರಕ್ಕೆ ಇಳಿಕೆಯಾಗಿದೆ ಎಂದರು.
ಇನ್ನು ದೇಶದಲ್ಲಿ ಇದುವರೆಗೆ 19.77 ಲಕ್ಷ ಮಂದಿ ಗುಣಮುಖರಾಗಿದ್ದು ಸೋಂಕಿನಿಂದ ಗುಣಮುಖ ಹೊಂದುವವರ ಸಂಖ್ಯೆ ಶೇಕಡಾ 73.18ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ಹೇಳಿದೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News