Breaking News

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ; ಪಿಎಸ್ಐ ಅರ್ಜುನ್ ಅಮಾನತು

ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಠಾಣೆಯ ಸಿಬ್ಬಂದಿಯ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು.

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ. ಪಿಎಸ್ಐ ಅರ್ಜುನ್ ಸಸ್ಪೆಂಡ್ ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ನೀಡಿದ್ದಾರೆ.

ಅಮಾನತು ಆದ ಪೊಲೀಸ್ ಅಧಿಕಾರಿ ಅರ್ಜುನ್ರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಪಿಎಸ್ಐ ವಿರುದ್ಧದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ಈ ಘಟನೆ ಸಂಭವಿಸಿತ್ತು. ಇಂದು ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಎಸ್ಪಿ ವಿಚಾರಣೆ ನಡೆಸಿದ್ದರು.

ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಠಾಣೆಯ ಸಿಬ್ಬಂದಿಯ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಇದೀಗ ಪಿಎಸ್​ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

About vijay_shankar

Check Also

ಅಮೀನಗಡ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಜ ಯುವ ಸಂಘಗಳ ಒಕ್ಕೂಟ ವಿಜಯಪುರ ಹಾಗೂ ಮುದ್ದೇಬಿಹಾಳ ಘಟಕದಿಂದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.