ದಾವಣಗೆರೆ, ಆಗಸ್ಟ್ 18: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರನ್ನೇನಾದರೂ ಸಚಿವ ಸ್ಥಾನದಿಂದ ಹೊರಗುಳಿಸುವ ಪ್ರಯತ್ನಕ್ಕೆ ಕೈ ಹಾಕಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಂದಿನ ಸಚಿವ ಸಂಪುಟದಲ್ಲಿ ಸಚಿವರಾಗಬೇಕೆಂದಿದ್ದರೆ ನೀವು ಬೇಕಾದರೆ ಸಚಿವರಾಗಿ ಯಾವುದೇ ಅಭ್ಯಂತರವಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಉಸ್ತುವಾರಿಯಿಂದ ತೆಗೆಸಲು ಪ್ರಯತ್ನಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯ ಕನಕ ಗುರುಪೀಠದ ಶಾಖಾ ಮಠದಲ್ಲಿ ಶ್ರೀಗಳು ಗುಡುಗಿದ್ದಾರೆ.