
ಬೆಂಗಳೂರು : ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿಗಳಿಗೆ ರಾಜ್ಯ ಸರ್ಕಾರದಿಂದ ಮೀಸಲಾತಿಯನ್ನು ಪ್ರಕಟಗೊಳಿಸಲಾಗಿದೆ. ಇನ್ನೇನು ಚುನಾವಣೆ ಕೂಡ ಸದ್ಯದಲ್ಲೇ ಘೋಷಣೆ ಕೂಡ ಆಗಲಿದೆ ಎಂದೇ ನಿರೀಕ್ಷೆಸಲಾಗಿತ್ತು. ಆದರೆ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಈಗ ಮತ್ತೆ ಕರೋನಾ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಇದು ಮೂರನೆ ಅಲೆಯ ಸಣ್ಣ ಸುಳಿವಾಗಿದೆ, ಆಧದರಿಂದ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವಂತೆ ನಿರ್ಣಯವನ್ನು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಈ ಮೂಲಕ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರಕಾರ ಬಿಗ್ ಶಾಕ್ ಕೊಟ್ಟಿದೆ.ಆದರೆ ತಜ್ಞರ ಪ್ರಕಾರ ಡಿಸೆಂಬರ್ ನಲ್ಲಿ ಮೂರನೆ ಅಲೆ ಸೃಷ್ಟಿ ಆಗಬಹುದು ಎಂದು ಈ ನಿರ್ಧಾರ ಕೈಗೊಂಡಿದೆ.