ಬೆಳಗಾವಿ: ಎರಡು ವಿಮಾನಗಳ ದುರಂತದಲ್ಲಿ ಹುತಾತ್ಮರಾದ ಬೆಳಗಾವಿಯ ಪೈಲಟ್, ವಿಂಗ್ ಕಮಾಂಡರ್ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ನಮನ ಸಲ್ಲಿಸಿದ ಬಳಿಕ, ಗಣ್ಯರು ಅಂತಿಮ ನಮನ ಸಲ್ಲಿಸಲಾಯಿತು.
ಯೋಧನ ಪಾರ್ಥೀವ ಶರೀರವನ್ನು ಸೇನೆಯ ವಿಶೇಷ ವಿಮಾನದ ಮೂಲಕ ಭಾನುವಾರ ಮಧ್ಯಾಹ್ನ 12.30 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಯಿತು.
ಜಿಲ್ಲಾಧಿಕಾರಿ ಪಾಟೀಲ ಅವರಿಂದ ಶ್ರದ್ಧಾಂಜಲಿ:
ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ ವಿಂಗ್ ಕಮಾಂಡರ್ ಶ್ರೀ ಹನುಮಂತರಾವ್ ಸಾರಥಿ ಅವರು ನಿಧನರಾದ ವಿಷಯ ತಿಳಿದು ತುಂಬ ದುಃಖವಾಯಿತು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಂತಾಪ ವ್ಯಕ್ತಪಡಿಸಿದರು.

ವಿಮಾನಗಳ ದುರಂತದಲ್ಲಿ ಮೃತಪಟ್ಟ ಬೆಳಗಾವಿಯ ವಿಂಗ್ ಕಮಾಂಡರ್ ಹನಮಂತರಾವ್ ಅವರಿಗೆ ಗಣ್ಯೆರಿಂದ ಅಂತಿಮ ನಮನ
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News