
‘ಹೊಸ ಹನ್ನೆರಡು ಮೃತ ಪ್ರಕರಣಗಳು ತರ್ನ್ ಟರಾನ್ ಜಿಲ್ಲೆಯಲ್ಲಿ ವರದಿಯಾಗಿವೆ. ಈವರೆಗೆ ಈ ಜಿಲ್ಲೆಯಲ್ಲಿ ಎಪ್ಪತ್ತೈದು ಮಂದಿ ಮೃತರಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಕುಲ್ವಂತ್ ಸಿಂಗ್ ತಿಳಿಸಿದ್ದಾರೆ.
‘ಮೃತರ ಕುಟುಂಬದವರು ಹೇಳಿಕೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸುವುದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪಡೆದ ಮಾಹಿತಿಯಿಂದಾಗಿ ಎಪ್ಪತ್ತೈದು ಮಂದಿ ಮೃತರಾಗಿರುವುದು ತಿಳಿದುಬಂದಿದೆ. ಕುಟುಂಬಸ್ಥರು ಮೃತರ ಅಂತ್ಯಕ್ರಿಯೆಯನ್ನು ಈಗಾಗಲೇ ನಡೆಸಿದ್ದಾರೆ. ಕುಟುಂಬಸ್ಥರ ಮನವೊಲಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.
ತರ್ನ್ ಟರಾನ್ ಹೊರತುಪಡಿಸಿ ಅಮೃತಸರದಲ್ಲಿ ಹನ್ನೆರಡು, ಬಟಾಲಾದಲ್ಲಿ ಹನ್ನೊಂದು ಮಂದಿ ಮೃತರಾಗಿದ್ದಾರೆ.
ಘಟನೆಗೆ ಪಂಜಾಬ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ ರಾಜ್ಯದ ಪಟಿಯಾಲ, ಬರ್ನಾಲಾ, ಪಠಾಣ್‌ಕೋಟ್ ಮತ್ತು ಮೊಗಾ ಸೇರಿದಂತೆ ಹಲವೆಡೆ ಪ್ರತಿಭಟನೆಯನ್ನು ನಡೆಸಿದೆ.
ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ. ಪ್ರಕರಣ ಸಂಬಂಧ, ಈಗಾಗಲೇ ಏಳು ಅಬಕಾರಿ ಮತ್ತು ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಇಂಥ ಕೃತ್ಯಗಳಿಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವ ಪೊಲೀಸ್ ಹಾಗೂ ಅಬಕಾರಿ ಇಲಾಖೆ ವಿಫಲತೆಯು ನಾಚಿಕೆಗೇಡಿನ ವಿಷಯ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಮೃತ ವ್ಯಕ್ತಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹ 2 ನೆರವು ಘೋಷಿಸಿದೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News