ಬೆಳಗಾವಿ: ರಾಜ್ಯ ಸರಕಾರದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಹಾಗೂ ಕೇಂದ್ರ ಸರಕಾರದ ಕೃಷಿ ಮತ್ತು ಕಾರ್ಮಿಕ ಸಂಬಂಧಿತ ಕಾಯ್ದೆ ವಿರೋಧಿಸಿ ಸೋಮವಾರ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ ಸಂಘಟನೆಗಳು, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಗಾವಿನಲ್ಲಿ ಸಾವಿರಾರು ಮಂದಿ ವಿವಿಧ ಕಡೆಗಳಿಂದ ಮೆರವಣಿಗೆ ಮೂಲಕ ಬೆಳಗಾವಿ ಡಿ,ಸಿ ಆಫೀಸ್ ನಿಂದ ಸುವರ್ಣಸೌದವರೆಗೆ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ರೈತರಿಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಕೂಡ ಸಾಥ್ ನೀಡಿದರು,

ಉತ್ತರ ಕರ್ನಾಟಕದ ರೈತ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಸವರಾಜ ಕರಿಗಾರ , ಇದು ಸಾಂಕೇತಿಕ ಪ್ರತಿಭಟನೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ಎಂದು ಹೇಳಿದರು ಮತ್ತು ರೈತ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಮರಿಯಪ್ಪ ಡಬಗಲ್ಲ, ಹಾಗೂ ಬಾಗಲಕೋಟ್ಟ ಜಿಲ್ಲಾ ಅಧ್ಯಕ್ಷರಾದ ಆನಂದ ಜಕಾತಿ, ಮತ್ತು ರೈತರು ಅನೇಕ ಜನರು ಉಪಸ್ಥಿತಿ ಇದ್ದರು.
ಹೊಟೇಲ್ ಉದ್ಯಮದವರುby ನಮ್ಮ ಪ್ರತಿಭಟನೆಗೆ ಬೆಂಬಲ ನೀಡಬೇಕಿತ್ತು. ನಾವು ಬೆಳೆದ ಅನ್ನ ಮಾರಿ ಬದುಕುತ್ತಿರುವ ನೀವು ನಮಗೆ ಬೆಂಬಲ ನೀಡಬೇಕಿತ್ತು ಎಂಬ ಆಕ್ರೋಶ ವ್ಯಕ್ತಪಡಿಸಿದರು.