ವಿಜಯಪುರ : ಜಿಲ್ಲೆಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಮುಂದು ವರೆದಿದ್ದು, ಜಿಲ್ಲೆಯ ಅಪರಾಧ ವಿಭಾಗದ ದಳದ ಪೊಲೀಸರು ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಸಮರ ಸಾರಿರುವ ಜಿಲ್ಲೆಯ ಪೊಲೀಸರು, ಎಸ್ಪಿ ಅನುಪಮ ಅಗರವಾಲ್ ಹಾಗೂ ಎಎಸ್ಪಿ ರಾಮ ಅರಸಿದ್ಧಿ ಅವರ ಮಾರ್ಗದರ್ಶನದಲ್ಲಿ ಸಿಎಸ್‍ಎನ್ ವಿಭಾಗದ ಸಿಪಿಐ ಸುರೇಶ ಬೆಂಡೆಗುಂಬಳ ನೃತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಆ.1 ರಂದು ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಸವನಬಾಗೇವಾಡಿ ಪಟ್ಟಣದಲ್ಲಿ ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಬಂಧಿತರರನ್ನು ಸೋಮನಾಥ ರಾಮಚಂದ್ರ ಜಾಧವ (24), ಅಶೋಕ ಬಸವರಾಜ ಗಾಣಿಗೇರ (31), ಸಂತೋಷ ಶಿವಪ್ಪ ಚಿಂಚೊಳ್ಳಿ (28) ಎಂಬ ಮೂವರನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News