
ನಗರದ ಪತ್ರಿಕಾ ಭವನದಲ್ಲಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ,ಭವಿಷ್ಯತ್ತಿನಲ್ಲಿ ಹೇಗೆ ?ಎಂಬ ಆತಂಕ ಪತ್ರಕರ್ತರ ಅಳಲಾಗಿದೆ ಎಂದು ಅವರು ಹೇಳಿದರು. ಕಾನಿಪ ಸಂಘದ ಜಿಲ್ಲಾ ಘಟಕದಿಂದ ಒಳ್ಳೆಯ ಕಾರ್ಯಚಟುವಟಿಕೆಗಳು ನಡೆಯಲು ಎಲ್ಲ ಸದಸ್ಯರು ಹಾಗೂ ಪದಾಧಿಕಾರಿಗಳ ಸಹಕಾರ ಅತೀ ಅವಶ್ಯವಾಗಿ ಬೇಕು. ಎಲ್ಲರೂ ಸೇರಿ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುವ ಮೂಲಕ ಸಂಘಟನೆಯನ್ನು ಬಲಪಡಿಸೋಣ ಎಂದು ಹೇಳಿದರು.ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟಿçÃಯ ಮಂಡಳಿ ಸದಸ್ಯ ರಾಜು ಕೊಂಡಗೂಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರು ಕೋವಿಡ್-೧೯ ಭೀತಿಯ ಸಂದರ್ಭದಲ್ಲಿಯೂ ಕೊರೋನಾ ವಾರಿರ್ಸ್ಗಳಾಗಿ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾದುದು. ಆದರೆ ಸರಕಾರದಿಂದ ಮಾತ್ರ ಪತ್ರಕರ್ತರಿಗೆ ಯಾವುದೇ ರೀತಿಯ ನೆರವು ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ದೇವೇಂದ್ರ ಹೆಳವರ ಮಾತನಾಡುತ್ತಾ,ಸಮಾಜವನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕೊರೋನಾ ಸಂದರ್ಭದಲ್ಲಿಯೂ ಪತ್ರಕರ್ತರು ಪ್ರಾಣಾಪಾಯವನ್ನು ಲೆಕ್ಕಿಸದೇ ಜವಾಬ್ದಾರಿಯಿಂದ ತಮ್ಮ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಅವರೇ ಇಂದು ಆರ್ಥಿಕ ಸಂಕಷ್ಟವನ್ನು ಎದುರಿಸುವಂತಾಗಿದೆ. ಇಂಥ ಸಂದರ್ಭದಲ್ಲಿ ಸರಕಾರ ಅವರ
ನೆರವಿಗೆ ಬರಬೇಕಾದ ಅಗತ್ಯವಿದೆ.ಪತ್ರಕರ್ತರ ಸಂಕಷ್ಟಕ್ಕೆ ಸರಕಾರ ಸ್ಪಂದಿಸದಿರುವುದು ವಿಷಾದನೀಯ ಎಂದರು.
ಜಿಲ್ಲಾ ಕಾನಿಪ ಸಂಘದ ಉಪಾಧ್ಯಕ್ಷ ಫಿರೋಜ್ ರೋಜಿನ್ದಾರ ಮಾತನಾಡಿ, ಸರಕಾರ ಸಹ ಪತ್ರಕರ್ತರ ಸೇವೆಯು ಸಮಾಜಕ್ಕೆ ಅಗತ್ಯ ಸೇವೆ ಎಂದು ಹೇಳಿದೆ. ಪತ್ರಕರ್ತರೂ ಕೂಡ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತ ಕೊರೋನಾ ಬಗ್ಗೆ ಜನರಲ್ಲಿ ಮಾಧ್ಯಮದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ದಿನೇ-ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇಂಥ ಸಂದರ್ಭದಲ್ಲಿ ಪತ್ರಕರ್ತರು ಬಹಳ ಜಾಗೃತೆಯಿಂದ ಕಾರ್ಯ ನಿರ್ವಹಿಸುವ ಜೊತೆಗೆ ತಮ್ಮ ಹಾಗೂ ಕುಟುಂಬದವರ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶಮಸುದ್ದೀನ್ ಸೈಯ್ಯದ್ ಅವರ ಸಂಪಾದಕತ್ವದಲ್ಲಿ ಹೊರಬರುತ್ತಿರುವ ಹಟಾತ್ ಸ್ಪೋಟ್ ದಿನಪತ್ರಿಕೆ ಆರಂಭವಾಗಿ ಒಂದು ನೂರು ದಿನ ಪೂರೈಸಿದ್ದಕ್ಕಾಗಿ ಸಂತಸ ವ್ಯಕ್ತ ಪಡಿಸುತ್ತಾ ಪತ್ರಿಕೆಯನ್ನು ವಿತರಿಸಿ, ನಂತರದಲ್ಲಿ ಮಾತನಾಡುತ್ತಾ, ದಿನ ಪತ್ರಿಕೆ ಪ್ರಕಟಣೆ ಇಂದು ಅಷ್ಟು ಸುಲಭದ ಮಾತಲ್ಲಾ ಎಂದರು.ಪತ್ರಿಕೆಯ ಬೆಳವಣಿಗೆಗೆ ಪರೋಕ್ಷವಾಗಿ ಅಪರೋಕ್ಷವಾಗಿ ಸಹಾಯ ಸಹಕಾರ ನೀಡಿದ ಜಿಲ್ಲೆಯ ಜನತೆಗೆ ಮತ್ತು ಕಾನಿಪ ಸಂಘದ ಎಲ್ಲ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಧನ್ಯವಾದ ತಿಳಿಸಿದರು.
ಸಂಘದ ಜಿಲ್ಲಾ ಗ್ರಾಮೀಣ ಉಪಾಧ್ಯಕ್ಷ ಅಶೋಕ ಕುಲಕರ್ಣಿ ವೇದಿಕೆ ಮೇಲಿದ್ದರು. ಕೊರೋನಾ ಹಿನ್ನೆಲೆಯಲ್ಲಿ ಪತ್ರಿಕಾ ದಿನಾಚರಣೆಯನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮುಖಾಂತರ ಸರಳ ರೀತಿಯಲ್ಲಿ ಆಚರಿಸಲಾಯಿತು. ಕಾನಿಪ ಸಂಘದ ಹಲವಾರು ಸದಸ್ಯರು, ವಿವಿಧ ತಾಲೂಕಾ ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾನಿಪ ಸಂಘದ ಸದಸ್ಯ ವಿಜಯಕುಮಾರ ಕೋತವಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೋಂಡೂರ ವಂದಿಸಿದರು.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News