ನವದೆಹಲಿ : ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಳೆ ವಾಹನ ಗುಜರಿಗೆ ಹಾಕಿ, ಹೊಸ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡುವ ಯೋಜನೆ ಜಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕಡಿಮೆ ಮೈಲೇಜ್ ನೀಡುವ, ವಾಯುಮಾಲಿನ್ಯಕ್ಕೆ ಕಾರಣವಾಗುವ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ, ಹೊಸ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡುವ ಯೋಜನೆ ಬಹುತೇಕ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಇದು ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಈ ಹೊಸ ಯೋಜನೆಯಿಂದ ವಾಯುಮಾಲಿನ್ಯ ಕಡಿಮೆಯಾಗುವುದರ ಜೊತೆಗೆ ಆಟೋಮೊಬೈಲ್ ಕ್ಷೇತ್ರ ಚೇತರಿಕೆ ಕಾಣಲಿದೆ ಎಂದು ಹೇಳಿದರು.