Breaking News

ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಹರಿಯಾಣದ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ಪಕ್ಷದ ಕರ್ನಾಲ್ ಜಿಲ್ಲಾಧ್ಯಕ್ಷ ಇಂದರ್ಜಿತ್ ಸಿಂಗ್ ಗೋರಾಯ ಪಕ್ಷ ತೊರೆದಿದ್ದಾರೆ. ಈ ಕುರಿತು ಪಿಟಿಐ ವರದಿ ಮಾಡಿದೆ.

ಜೆಜೆಪಿಯು ಹರಿಯಾಣದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಈ ಹಿಂದೆ ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕ್ ದಳ (ಐಎನ್‌ಎಲ್‌ಡಿ)ದ ಶಾಸಕ ಅಭಯ್ ಸಿಂಗ್ ಚೌಟಾಲ ರಾಜೀನಾಮೆ ನೀಡಿದ್ದು, “ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು! ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕಾನೂನುಗಳ ವಿರುದ್ಧ ನಾನು ರಾಜೀನಾಮೆ ನೀಡಿದ್ದೇನೆ. ಪ್ರತಿಪಕ್ಷದಲ್ಲಿ ಕುಳಿತಿರುವ ಇತರ ಎಲ್ಲ ನಾಯಕರು ಮತ್ತು ರೈತರ ಮಕ್ಕಳು ಎನಿಸಿಕೊಂಡವರು ರೈತನೊಂದಿಗೆ ನಿಲ್ಲಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಹೇಳಿದ್ದರು.

https://bayalubirugali.com/2021/02/02/fake-gunman-andr-4/

ಲಕ್ಷಾಂತರ ರೈತರು ಕಳೆದ 2 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಕುತಂತ್ರಗಳು ನಡೆಯುತ್ತಲೇ ಇವೆ. ಇದರ ನಡುವೆ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬಿಜೆಪಿಯ ಶಾಸಕರು ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ. ಜೊತೆಗೆ ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಮೈತ್ರಿಯಿಂದ ಹೊರಬಂದಿವೆ.

About vijay_shankar

Check Also

AICC ಕಾರ್ಯದರ್ಶಿಯಾಗಿ ಡಾ: ಆರತಿ ಕೃಷ್ಣ ಆಯ್ಕೆ

ನವದೆಹಲಿ: ಅನಿವಾಸಿ ಭಾರತೀಯ ನಿಕಟಪೂರ್ವ ಕರ್ನಾಟಕ ಸರ್ಕಾರದ (ಎನ್ಆರ್ಐ ಫೋರಂ) ಉಪಾಧ್ಯಕ್ಷೆಯದ ಡಾಕ್ಟರ್ ಆರತಿಕೃಷ್ಣ ರವರನ್ನು ಅಖಿಲ ಭಾರತ ರಾಷ್ಟ್ರೀಯ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.