ಈಗಾಗಲೇ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇದರ ನಡುವೆಯೂ ಆಗಸ್ಟ್ 11ರವರೆಗೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ರಾಜ್ಯ ಹವಾಮಾನ ಇಲಾಖೆ, ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಅಲ್ಲದೇ ಕರಾವಳಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜನರು ಎಚ್ಚರಿಕೆಯಿಂದ ಇರಬೇಕು ಎಂಬುದಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.