ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ ವಿರುದ್ಧವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಸಿಡಿದೆದ್ದಿದ್ದಾರೆ. ತಮ್ಮ ಇಲಾಖೆಯ ಕುರಿತಂತೆ ಸಿಎಂ ಹಸ್ತ ಕ್ಷೇಪದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಕುರಿತು ಸಿಎಂ ಯಡಿಯೂರಪ್ಪ ವಿರುದ್ಧವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಪತ್ರದ ಮೂಲಕ ದೂರು ನೀಡಿರುವ ಅವರು, ತಮ್ಮ ಇಲಾಖೆಗೆ ಹಣಕಾಸು ಬಿಡುಗಡೆಯಲ್ಲಿನ ತಾರತಮ್ಯ ಹಾಗೂ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ತೀರ್ಮಾನ ಕೈಗೊಂಡಿರುವಂತೆ ಸಿಎಂ ಕಾರ್ಯ ವೈಖರಿ ವಿರುದ್ಧ ಕಿಡಿಕಾರಿದ್ದಾರೆ.
ಇನ್ನೂ ಶಾಸಕರ ಆಯ್ದ ಕ್ಷೇತ್ರಗಳಿಗೆ ಅನುದಾನ ಒದಗಿಸುವ ಮೂಲಕವೂ ಸ್ವ ಪಕ್ಷೀಯ ನಿರ್ಧಾರವನ್ನು ಸಿಎಂ ಯಡಿಯೂರಪ್ಪ ಕೈಗೊಂಡಿರುವ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿರುವಂತೆ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಕಾರ್ಯ ಶೈಲಿ ಬದಲಿಸದಿದ್ದರೆ ಕಷ್ಟ ಎಂಬುದಾಗಿ ತಿಳಿಸಿದ್ದಾರೆ.
ಸಿಎಂ ವಿರುದ್ಧ ಪ್ರಧಾನಿ ಮೋದಿ, ಅಮೀತ್ ಶಾ, ರಾಷ್ಟಿಯ ಅಧ್ಯಕ್ಷ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಲಿಖಿತ ದೂರನ್ನು ನೀಡಿದ್ದಾರೆ.
