Breaking News

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಕರ್ನಾಟಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆಯು ಉದ್ಯೋಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ ಎ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಲೋಕಸೇವಾ ಆಯೋಗವು ಅಧಿಸೂಚನೆ ಹೊರಡಿಸಿದೆ.

ಒಟ್ಟು 16 ಹುದ್ದೆಗಳ ಪೈಕಿ ಬಿ.ಎಸ್ಸಿ (ಅರಣ್ಯ ಶಾಸ್ತ್ರ) ಪದವೀಧರರಿಗೆ 8, ಬಿ.ಎಸ್ಸಿ (ಅರಣ್ಯ ಶಾಸ್ತ್ರ) ಪದವಿ ಹೊರತುಪಡಿಸಿ ಇತರೆ ವಿಜ್ಞಾನ/ಇಂಜಿನಿಯರಿಂಗ್ ಪದವೀಧರರಿಗೆ 8 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 20-10-2020, ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2020 ಕೊನೆ ದಿನವಾಗಿದೆ. ಶುಲ್ಕ ಪಾವತಿಸಲು 21-10-2020 ಕೊನೆ ದಿನಾಂಕವಾಗಿದೆ.

ಪರೀಕ್ಷಾ ಶುಲ್ಕ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600 ರೂ. 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ. ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕ ನಿಗದಿಮಾಡಲಾಗಿದೆ.

About vijay_shankar

Check Also

test

test

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.