ಕೊಚ್ಚಿ:- ದುಬೈ- ಕೊಜಿಕೋಡ್ ವಿಮಾನ X1344 ಬೋಯಿಂಗ್ 737 ವಿಮಾನದಲ್ಲಿ 174 ಮಂದಿ ಪ್ರಯಾಣಿಕರು ಇದ್ದರು. ಸಂಜೆ 7:41ರಲ್ಲಿ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ವಿಮಾನಯಾನ ಸಂಸ್ಥೆಯ ಮೂಲಗಳು ತಿಳಿಸಿವೆ. ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್‌ಡಿಆರ್‌ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ಕೇರಳ ಪೊಲೀಸ್ ಅಧಿಕಾರಿಗಳ ಪ್ರಕಾರ, ಕನಿಷ್ಠ 35 ಮಂದಿ ಗಾಯಗೊಂಡಿದ್ದು, ಅವರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ದುಬೈನಿಂದ 174 ಮಂದಿ ಪ್ರಯಾಣಿಕರನ್ನು ಹೊತ್ತು ಬಂದ ಇಂಡಿಯನ್ ಏರ್ಲೈನ್ ಇಂದು ಸಂಜೆ ಕೇರಳದ ಕೋಯಿಕ್ಕೋಡ್ನ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ರನ್ವೇಯಿಂದ ಜಾರಿದೆ. ಈ ಅವಘಡದಲ್ಲಿ ಓರ್ವ ಪೈಲೆಟ್ ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.