ಮಡಿಕೇರಿ ಆ. 22: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ ಮಳೆ 15.12 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.83 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1838.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1910.77 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.30 ಮಿ.ಮೀ. ಕಳೆದ ವರ್ಷ ಇದೇ ದಿನ 22.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2591.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2554.09 ಮಿ.ಮೀ. ಮಳೆಯಾಗಿತ್ತು.
ಕೊಡಗಿನಲ್ಲಿ ಮಳೆ ತಗ್ಗಿದರೂ, ಆತಂಕ ಮಾತ್ರ ದೂರವಾಗಿಲ್ಲ…
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.33 ಮಿ.ಮೀ. ಕಳೆದ ವರ್ಷ ಇದೇ ದಿನ 3.28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1679.92 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1913.46 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.73 ಮಿ.ಮೀ. ಕಳೆದ ವರ್ಷ ಇದೇ ದಿನ 3.47 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1245.53 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1264.75 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-
ಮಡಿಕೇರಿ ಕಸಬಾ 20, ನಾಪೋಕ್ಲು 14.20, ಸಂಪಾಜೆ 25.20, ಭಾಗಮಂಡಲ 25.80, ವಿರಾಜಪೇಟೆ ಕಸಬಾ 9, ಹುದಿಕೇರಿ 13, ಶ್ರೀಮಂಗಲ 21, ಪೊನ್ನಂಪೇಟೆ 4, ಅಮ್ಮತ್ತಿ 8, ಬಾಳೆಲೆ 13, ಸೋಮವಾರಪೇಟೆ ಕಸಬಾ 16.40, ಶನಿವಾರಸಂತೆ 3.60, ಶಾಂತಳ್ಳಿ 31.20, ಕೊಡ್ಲಿಪೇಟೆ 15.80, ಕುಶಾಲನಗರ 2.40, ಸುಂಟಿಕೊಪ್ಪ 7 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (21-08-2020)
* ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.38 ಅಡಿಗಳು, ಕಳೆದ ವರ್ಷ ಇದೇ ದಿನ 2858.07 ಅಡಿ.
* ಹಾರಂಗಿಯಲ್ಲಿ ಬಿದ್ದ ಮಳೆ 7.40 ಮಿ.ಮೀ. ಕಳೆದ ವರ್ಷ ಇದೇ ದಿನ 2.40 ಮಿ.ಮೀ.,
* ಇಂದಿನ ನೀರಿನ ಒಳಹರಿವು 2837 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2310 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 1437, ನಾಲೆಗೆ 200. ಕಳೆದ ವರ್ಷ ಇದೇ ದಿನ ನದಿಗೆ 854, ನಾಲೆಗೆ 1600 ಕ್ಯುಸೆಕ್.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News