Breaking News

KPSC ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿದ ಆಯೋಗ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 24 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಕರ್ನಾಟಕ ಲೋಕಸೇವಾ ಆಯೋಗ(KPSC)ದ ಕಾರ್ಯದರ್ಶಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.

“ಜನವರಿ 24 ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಿದ್ದ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊ೦ದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿದೆ. ಆದ್ದರಿಂದ ಅನಿವಾರ್ಯ ಕಾರಣಗಳಿಂದಾಗಿ ಅವುಗಳನ್ನು ಮುಂದೂಡಲಾಗಿದೆ” ಎಂದು ಆಯೋಗ ತನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 23 ಮತ್ತು 24 ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ 24 ರಂದು ನಡೆಯಲಿರುವ ಪರೀಕ್ಷಗಳ ಪ್ರಶ್ನೆಪತ್ರಿಕೆ ಶನಿವಾರ ಸೋರಿಕೆಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಆಯೋಗವು ಹೇಳಿದೆ.

ಪರೀಕ್ಷೆಗಳ ದಿನಾಂಕವನ್ನು ಮರುನಿಗದಿಪಡಿಸಿ ಪ್ರಕಟಿಸಲಾಗುವುದೆಂದು ಆಯೋಗವು ತಿಳಿಸಿದೆ.

About vijay_shankar

Check Also

ಅಮೀನಗಡ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಜ ಯುವ ಸಂಘಗಳ ಒಕ್ಕೂಟ ವಿಜಯಪುರ ಹಾಗೂ ಮುದ್ದೇಬಿಹಾಳ ಘಟಕದಿಂದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.