ಹುನಗುಂದ : ಶಾಲಾ–ಕಾಲೇಜುಗಳು ಪ್ರಾರಂಭವಾಗಿ ತಿಂಗಳು ಕಳೆದರೂ, ಗ್ರಾಮಾಂತರ ಪ್ರದೇಶಗಳಿಂದ ನಗರ, ಪಟ್ಟಣ ಪ್ರದೇಶಗಳ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಬಸ್ ಸಿಗುತ್ತಿಲ್ಲ. ಶಾಲಾ, ಕಾಲೇಜಿಗೆ ತೆರಳಲು ಪರದಾಡುತ್ತಿರುವ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಬಸ್ಸ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಇಂದು ಧನ್ನೂರ್ ಕ್ರಾಸ್ ನಲ್ಲಿ ರೋಡ್ ನಲ್ಲಿ ಮುಳ್ಳುಗಳನ್ನು ಹಾಕಿ, ರೋಡಿನ ಮಧ್ಯೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ.
ಧನ್ನೂರ ಗ್ರಾಮದ ವಿದ್ಯಾರ್ಥಿಗಳು ಮತ್ತು ಇಂದವಾರ, ಹಾವರಗಿ, ಮರೋಳ, ಹುಲ್ಲಳ್ಳಿ ಮತ್ತು ಸುತ್ತಮುತ್ತಲಿನ ವಿದ್ಯಾರ್ಥಿಗಳು ಬಸ್ಸ್ ಸವಲಬ್ಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.
ಜ1, ರಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಿದ್ದು, ಶಾಲಾ ಕಾಲೇಜಿಗೆ ಬರಲು ಹರಸಾಹಸ ಪಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಮುನ್ನವೇ ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ಆರಂಭವಾಗಿದ್ದು, ಬೆಳಿಗ್ಗೆ ವೇಳೆ ಹಳ್ಳಿಗಳಿಂದ, ಪಟ್ಟಣದ ಬಸ್ ನಿಲ್ದಾಣಕ್ಕೆ ತೆರಳುವ ಬಸ್‌ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳ ತಂಡವೇ ಕಣ್ಣಿಗೆ ಕಟ್ಟುತ್ತದೆ.

ತರಗತಿಗಳು ತಪ್ಪಿಹೋಗುತ್ತವೆ ಎಂಬ ಕಾರಣಕ್ಕೆ ಪ್ರಾಣ ಪಣಕ್ಕಿಟ್ಟು ಬಸ್‌ಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಹೋಗುವುದು ಸಾಮಾನ್ಯವಾಗಿದೆ. ಇದನ್ನು ಕಂಡೂ ಕಾಣದಂತಿರುವ ಅಧಿಕಾರಿಗಳು ಒಮ್ಮೊಮ್ಮೆ ಹೆಚ್ಚುವರಿ ಬಸ್ ಹಾಕಿದರೆ ಉಳಿದ ದಿನಗಳಲ್ಲಿ ದಿನ ಸಾಯುವವರಿಗೆ ಅಳುವವರು ಯಾರು ಎಂಬಂತೆ ಸುಮ್ಮನಿರುತ್ತಾರೆ. ಸಮರ್ಪಕ ಬಸ್ ಇಲ್ಲದೆ ವಿದ್ಯಾರ್ಥಿಗಳಿಗೆ, ಪ್ರಯಾಣಿಕರಿಗೆ ನರಕ ಯಾತನೆ ಅನುಭವಿಸುವಂತೆ ಮಾಡುತ್ತಿದ್ದಾರೆ.
ತಾಲ್ಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಕ್ಕೆ ನಿತ್ಯವೂ ಕಚೇರಿಗೆ, ಆಸ್ಪತ್ರೆಗೆ ತೆರಳುವವರು ಬೆಳಿಗ್ಗೆಯೇ ಬಸ್ ನಿಲ್ದಾಣದಲ್ಲಿ ಇರುತ್ತಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬರಲಿದ್ದು, ಇದರಿಂದ ಸಾರ್ವಜನಿಕರಿಗೂ ತೀವ್ರ ಸಮಸ್ಯೆಯಾಗಿದೆ. ವಯಸ್ಸಾದವರು ಕೆಎಸ್‌ಆರ್‌ಟಿಸಿ ಬಸ್‌ಗಳಿಲ್ಲದೆ ಖಾಸಗಿ ಬಸ್ ಮೊರೆ ಹೋಗುವುದು ಸಾಮಾನ್ಯವಾಗಿದೆ ಎಂದು
In ವಿನೋದ್ ನಾಟೇಕಾರ ಆರೋಪಿಸಿದರು. ಈ ಬಗ್ಗೆ ಇಲಾಖೆ ಇನ್ನಾದರೂ ಈ ರಸ್ತೆ ಮಾರ್ಗವಾಗಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ನಮ್ಮ ನಾವು ಕೂಡಾ ಒತ್ತಾಯ ಮಾಡುತ್ತೇವೆ.