
ಮಡಿಕೇರಿ ಆ.06-ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ.
ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು
ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ ಮನೆ ಖಾಲಿ ಇರುತ್ತದೆ. ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿರುತ್ತಾರೆ. 04 ಜನ ಕಾಣೆಯಾಗಿರುವ ಮಾಹಿತಿ ಇದೆ.
ಜಿಲ್ಲೆಯ ಂಜvಚಿಟಿಛಿeಜ ಖesಛಿue ಖಿeಚಿm ಈ ಧಾವಿಸುತ್ತಿದ್ದು, ಪರಿಶೀಲನೆ ನಂತರ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News