ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯ ವಿಧಾನಮಂಡಲ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಸೆಪ್ಟೆಂಬರ್ 21 ರಿಂದ 30ರವರೆಗೆ ಅಧಿವೇಶನ ನಡೆಸಲು ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ವಿಧಾನಸಭಾ ಸ್ಪೀಕರ್ ಹಾಗೂ ವಿಧಾನಪರಿಷತ್ ಸಭಾಪತಿ ಅವರಿಗೆ ಸಂಪುಟ ಮನವಿ ಮಾಡಿದೆ.
ಕೊರೋನಾ ಮಹಾಮಾರಿಯಿಂದಾಗಿ ಕಳೆದ ಬಾರಿ ಬೇಸಿಗೆ ಅಧಿವೇಶನವನ್ನು ರಾಜ್ಯದಲ್ಲಿ ಮುಂದೂಡಲಾಗಿತ್ತು. ಈ ವೇಳೆ ಸುಗ್ರೀವಾಜ್ಞೆ ಮೂಲಕ ಬಿಎಸ್ ಯಡಿಯೂರಪ್ಪ ಸರ್ಕಾರ ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯನ್ನು ಅಂಗೀಕಾರ ಪಡೆದಿತ್ತು