Breaking News

Recent Posts

ವ್ಯಾಪಕ ಮಳೆ: ನದಿತೀರದ ಗ್ರಾಮಗಳು, ಪರಿಹಾರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ, ಪರಿಶೀಲನೆ

ಬೆಳಗಾವಿ, ಆ.17 : ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಮೊದಲು‌ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. …

Read More »

ಪೋಸ್ಟ್‌ಗಳ ಮೇಲೆ ನಿಗಾ: ಪ್ರಚೋದನಾತ್ಮಕ ಪೋಸ್ಟ್‌ ಕಳುಹಿಸುವವರ ಮೇಲೆ ಹದ್ದುಗಣ್ಣು

ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪ್ರಕರಣದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ಹಾಕುವವರ ವಿರುದ್ಧ ಕಠಿನ ಕ್ರಮಕ್ಕೆ ಸರಕಾರ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್ ಗಳು ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಸವಾಲಾಗುತ್ತಿರುವುದರಿಂದ ಈ ಕುರಿತು ಮತ್ತಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದಕ್ಕೂ ತೀರ್ಮಾನಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ಹಾಕುವವರ ಮೇಲೆ ಹದ್ದಿನ ಕಣ್ಣಿಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇತ್ತೀಚಿನ …

Read More »

ರಾಯಣ್ಣ ಪ್ರತಿಮೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿ: ಸಿದ್ದರಾಮಯ್ಯ ಟ್ವೀಟ್

ಬೆಳಗಾವಿ: ‘ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಟ್ವೀಟ್ ಮಾಡಿದ್ದಾರೆ. ‘ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು, ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆಗೆ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ವರ್ತಿಸಬೇಕು’ ಎಂದು ಹೇಳಿದ್ದಾರೆ. ರಾಯಣ್ಣನ ಜಯಂತಿಯ ದಿನವಾದ ಶನಿವಾರ ಅಭಿಮಾನಿಗಳು ಅವರ ಪ್ರತಿಮೆ ಪ್ರತಿಷ್ಠಾಪನೆಗೆ ನಸುಕಿನಲ್ಲಿ ಮುಂದಾಗಿದ್ದರು. ತಡೆದ ಪೊಲೀಸರು ಪ್ರತಿಮೆ ವಶಕ್ಕೆ …

Read More »