
ಭೈರಪ್ಪ(30) ಮೃತಪಟ್ಟ ಯುವಕ. ಈತ 7 ವರ್ಷದ ಬಾಲಕಿಯೊಬ್ಬಳಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರ ತಿಳಿದು ರೊಚ್ಚಿಗೆದ್ದ ಆಕೆಯ ಪೋಷಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನಪ್ಪಿದ್ದಾನೆ. ಈ ಬಗ್ಗೆ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ಸಂಬಂಧಿಕರನ್ನು ಬಂಧಿಸಲಾಗಿದೆ. ಹಾಗೆ ಅತ್ಯಾಚಾರ ಎಸಗಿದ ಹಿನ್ನಲೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.