ಬೆಂಗಳೂರು, 18- ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ’ ಎಂದು ಮುಖ್ಯಮಂತ್ರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾರ್ಗಸೂಚಿ ಹಂಚಿಕೊಳ್ಳಲಾಗಿದೆ. ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ ಗಣೇಶ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಲು ನಿಧ೯ರಿಸಿದೆ. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದೊಳಗೆ, ಮನೆಗಳಲ್ಲಿ, ಸರ್ಕಾರಿ, ಖಾಸಗಿ , ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು. ಆಚರಣೆಗಳಲ್ಲಿ ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ನೋಡಿಕೊಳ್ಳುವುದು ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
ಗಣೇಶೋತ್ಸವ ಸಮಿತಿಗಳು ಮತ್ತು ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಮುಂಚಿತವಾಗಿ ಅನುಮತಿ ಪಡೆದುಕೊಳ್ಳಬೇಕು. ಒಂದು ವಾರ್ಡ್‌ಗೆ ಅಥವಾ ಒಂದು ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಪ್ರೋತ್ಸಾಹಿಸುವುದು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
ಗಣೇಶೋತ್ಸವ ಸಮಿತಿಗಳು ಮತ್ತು ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಮುಂಚಿತವಾಗಿ ಅನುಮತಿ ಪಡೆದುಕೊಳ್ಳಬೇಕು. ಒಂದು ವಾರ್ಡ್‌ಗೆ ಅಥವಾ ಒಂದು ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಪ್ರೋತ್ಸಾಹಿಸುವುದು.