ಹಾವೇರಿ:- ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಪತ್ನಿ, ಅಳಿಯ ಸೇರಿದಂತೆ ಒಟ್ಟು ಐದು ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಕೋವಿಡ್ ಸೋಂಕು ಕುರಿತು ಸಚಿವರು ತಮ್ಮ ಟ್ವಿಟರ್ ಖಾತೆ ಮೂಲಕ ತಿಳಿಸಿದ್ದಾರೆ, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದು ವಿವರಿಸಿದ್ದಾರೆ.