ಡಿಜಿಟಲ್ ಡೆಸ್ಕ್ : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ ಮಾಡಿದೆ. ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಾರ ಅ.15 ರಿಂದ ಚಿತ್ರಮಂದಿರ ತೆರೆಯಲು ಅವಕಾಶ ನೀಡಲಾಗಿದ್ದು, 50 % ವೀಕ್ಷಕರಿಗೆ ಮಾತ್ರ ಚಿತ್ರಮಂದಿರಕ್ಕೆ ಪ್ರವೇಶ ನೀಡಲು ಅವಕಾಶ ಕಲ್ಪಿಸಲಾಗಿದೆ.
ಇದರ ಜೊತೆಗೆ ಶಾಲಾ ಕಾಲೇಜು, ಕೋಚಿಂಗ್ ಸಂಸ್ಥೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜುಕೊಳಗಳನ್ನು ಅಕ್ಟೋಬರ್ 15 ರಿಂದ ತೆರೆಯಲು ಅನುಮತಿ ನೀಡಲಾಗುವುದು, ಜೊತೆಗೆ ಮನರಂಜನಾ ಉದ್ಯಾನಗಳು ಮತ್ತು ಇತರ ರೀತಿಯ ಸ್ಥಳಗಳು.ಶಾಲೆಗಳು ಮತ್ತು ಕೋಚಿಂಗ್ ಸಂಸ್ಥೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಕೂಡ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಚಲನಚಿತ್ರ ಮಂದಿರಗಳು, ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ, ಶೇ. 50 ರಷ್ಟು ಸೀಟ್ ಗಳನ್ನು ಮಾತ್ರ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಆದರೆ ಕಂಟೈನ್ಮೆಂಟ್ ಝೋನ್ ಗಳಲ್ಲಿ ತೆರೆಯಲು ಅನುಮತಿ ನೀಡಲಾಗಿಲ್ಲ. ಕೊರೊನಾ ನಿಯಮಾವಳಿಗಳನ್ನು ಅಳವಡಿಸಿಕೊಳ್ಳಬೇಕಾಗಿದೆ.