Breaking News

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ ; ವಾಹನ ಸವಾರರಿಗೆ ಮತ್ತೆ ದರ ಹೆಚ್ಚಳದ ಬರೆ!

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 23 ಪೈಸೆ ಮತ್ತು ಡೀಸೆಲ್ ದರ 25 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಮಂಗಳವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 23 ಪೈಸೆ ಮತ್ತು ಡೀಸೆಲ್ ದರ 25 ಪೈಸೆ ಏರಿಕೆಯಾಗಿದೆ. ಆ ಮೂಲಕ 2021 ರ ಮೇ 4 ರಿಂದ ತೈಲೋತ್ಪನ್ನಗಳ ದರಗಳು ದೇಶಾದ್ಯಂತ 13ನೇ ಬಾರಿಗೆ ಏರಿಕೆಯಾದಂತಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.61ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ  89.45 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 93.05ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 84.38ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ  99.77ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.62ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ  93.55ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 87.22ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.12ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.16 ರೂ ಗೆ ಏರಿಕೆಯಾಗಿದೆ. 

About vijay_shankar

Check Also

ಅಮೀನಗಡ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಾನಂದ ಕಟ್ಟಿಮನಿ ಅವರಿಗೆ ಸದ್ಭಾವನ ರಾಜ್ಯ ಪ್ರಶಸ್ತಿ ಪ್ರಯುಕ್ತ ಅಭಿನಂದನ ಕಾರ್ಯಕ್ರಮ

ಅಮೀನಗಡ : ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಜ ಯುವ ಸಂಘಗಳ ಒಕ್ಕೂಟ ವಿಜಯಪುರ ಹಾಗೂ ಮುದ್ದೇಬಿಹಾಳ ಘಟಕದಿಂದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.