ಅಮೀನಗಡ: ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳಿಗೆ ʻಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿʼಯ ವಿಶೇಷ ಕಿರುಸಾಲ ಸೌಲಭ್ಯ ಯೋಜನೆಯ ಬಗ್ಗೆ ಅರಿವು ಮೂಡಿಸಿ ಅರ್ಜಿ ವಿತರಿಸಲಾಯಿತು.

ಬೀದಿಬದಿ ವ್ಯಾಪಾರಿಗಳಿಗಾಗಿ ಕೇಂದ್ರ ಸರ್ಕಾರದ ಆತ್ಮನಿರ್ಭರ್ ಯೋಜನೆಯಡಿಯಲ್ಲಿ 10 ಸಾವಿರ ರೂ.ಗಳ ಕಿರುಸಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ಸಾಕಷ್ಟು ವ್ಯಾಪಾರಿಗಳು ಇದಕ್ಕಾಗಿ ಅರ್ಜಿ ಸಲ್ಲಿಸಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಿಗಳು ಕಿರುಸಾಲಕ್ಕೆ ಅರ್ಜಿ ಸಲ್ಲಿಸಿ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ವ್ಯಾಪಾರ ಪ್ರಮಾಣ ಪತ್ರ ಇಲ್ಲದವರಿಗೂ ಸಾಲ: ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರ ಹೊಂದಿಲ್ಲದವರೂ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಅದಕ್ಕಾಗಿ ಆ ವ್ಯಾಪ್ತಿಯ ವಲಯ ಕಚೇರಿಯ ಸಮುದಾಯ ಸಂಘಟಕರು ಹಾಗೂ ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರು ಸ್ಥಳ ಪರಿಶೀಲನೆ ನಡೆಸಿ ಅವರಿಗೆ ಶಿಫಾರಸು ಪತ್ರ ನೀಡಬೇಕು ಎಂದು ಅಮೀನಗಡ ಪಟ್ಟಣ ಪಂಚಾಯತ ಮುಖ್ಯ ಅಧಿಕಾರಿ ಗುರುರಾಜ ಚೌಕಿಮಠ ಮಾಹಿತಿ ನೀಡಿದರು.
ನಿಗದಿತ ಅವಧಿಗೆ ಸರಿಯಾಗಿ ಸಾಲ ಮರುಪಾವತಿ ಮಾಡುವವರ ಬ್ಯಾಂಕ್ ಖಾತೆಗೆ ವಾರ್ಷಿಕ ಶೇ.7ರಷ್ಟು ಬಡ್ಡಿ ಸಹಾಯಧನವನ್ನು ನಗದು ರೂಪದಲ್ಲಿ ಮೂರು ತಿಂಗಳಿಗೊಮ್ಮೆ ನೇರವಾಗಿ ಜಮಾ ಮಾಡಲಾಗುತ್ತದೆ. ಎಲ್ಲ ವಾಣಿಜ್ಯ ಬ್ಯಾಂಕ್‌ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು, ಸಹಕಾರಿ ಬ್ಯಾಂಕ್‌ಗಳು, ಎನ್‌ಬಿಎಸ್ಸಿಗಳು, ಎಂಎಫ್‌ಐಗಳು, ಎಸ್‌ಎಚ್‌ಐ ಬ್ಯಾಂಕ್‌ಗಳು ಈ ಸೌಲಭ್ಯ ನೀಡುತ್ತವೆ ಎಂದು ತಿಳಿಸಿದರು.

ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಭಾರತಿ ಗಂಜೇಂದ್ರಗಡ ಪಟ್ಟಣ ಪಂಚಾಯತ ಅಧ್ಯಕ್ಷ ಸಂಗಪ್ಪ ತಳವಾರ, ಪಟ್ಟಣ ಪಂಚಾಯತ ಸದಸ್ಯ ಮನೋಹರ ರಕ್ಕಸಗಿ, ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ದಾವಲಸಾಬ ಬಾಗೇವಾಡಿ, ಪಟ್ಟಣ ಪಂಚಾಯತ ಸಿಬ್ಬಂದಿ ಮಂಜು ಪೂಜಾರ, ಶ್ರೀಮತಿ ಚಾಂದಬಿ ಎಂ, ಜಂಗಿ, ಶ್ರೀಮತಿ ಮಮ್ತಾಜಬೇಗಂ ಅಂಬಲಗಿ ಮತ್ತು ಮಲ್ಲಿಕಾರ್ಜುನ ಇಡಗುಂದಿ ಮತ್ತು ಅನೇಕ ಬೀದಿ ಬದಿ ವ್ಯಾಪಾರಸ್ಥರ ಸಂಘದ ಸರ್ವ ಸದಸ್ಯರು ಸ್ಥಳದಲ್ಲಿ ಹಾಜರಿದ್ದರು. ವರದಿ: ಎಮ್,ಡಿ, ಮುಸ್ತಾಪ್ ಮಾಸಾಪತಿ
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News