Breaking News

ಯಡಿಯೂರಪ್ಪ ಪರ ಮಠಾಧೀಶರು, ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ ಹೋರಾಟದ ಎಚ್ಚರಿಕೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಬಾರದು ಎಂದು ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ.
ತಿಪಟೂರು ರುದ್ರಮುನಿ ಶ್ರೀ ಸೇರಿದಂತೆ ಹಲವು ಸ್ವಾಮೀಜಿಗಳು ಈ ಕುರಿತಾಗಿ ಆಗ್ರಹಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದರೆ ವೀರಶೈವ ಲಿಂಗಾಯತ ಸಮಾಜದ ಶ್ರೀಗಳು ತಿರುಗಿ ಬೀಳುವ ಎಚ್ಚರಿಕೆ ನೀಡಿದ್ದಾರೆ.
ಸಮಾಜದ ಶ್ರೀಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪರ ನಿಂತಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬೆಂಬಲ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣರಾಗಿದ್ದಾರೆ. ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಬಾರದು ಎಂದು ತಿಪಟೂರಿನ ರುದ್ರಮುನಿ ಶ್ರೀಗಳು ಸೇರಿದಂತೆ ಹಲವು ಸ್ವಾಮೀಜಿಗಳು ಒತ್ತಾಯಿಸಿದ್ದು ಮುಖ್ಯಮಂತ್ರಿ ಅವರನ್ನು ಕೆಳಗಿಳಿಸಿದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ವೀರಶೈವ ಸಮಾಜದ ಶ್ರೀಗಳು ತಿರುಗಿಬೀಳುವ ಎಚ್ಚರಿಕೆ ನೀಡಲಾಗಿದ್ದು, ಬಿ.ಎಸ್. ಯಡಿಯೂರಪ್ಪ ಇರುವವರೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.

About vijay_shankar

Check Also

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.