ಬೆಂಗಳೂರು,: ಪ್ರವಾಹ ಸಂತ್ರಸ್ತರ ಜೀವದೊಂದಿಗೆ ಚೆಲ್ಲಾಟವಾಡಿದ್ದ, ವಿಲಕ್ಷಣ ವ್ಯಕ್ತಿತ್ವದ ಪೊಲೀಸ್ ಸಬ್‌ಇನ್ಸಪೆಕ್ಟರ್ ಮಲ್ಲಣ್ಣ ಯಲಗೋಡ್ ಅವರನ್ನು ಅಮಾನತು ಮಾಡಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಮಾಡಿದ್ದಾರೆ. ಕಳೆದ ಆರು ತಿಂಗಳುಗಳಲ್ಲಿ ಮಲ್ಲಣ್ಣ ಯಲಗೋಡ್ ಅಮಾನತಾಗುತ್ತಿರುವುದು ಇದು ಎರಡನೇ ಬಾರಿ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಣ್ಣ ಯಲಗೋಡ್ ಅವರು ಪ್ರವಾಹದಿಂದ ಮುಳುಗಡೆ ಆಗಿದ್ದ ಕೂಡಲಗಿ ಗ್ರಾಮದ ಸಂತ್ರಸ್ತರ ಜೀವದೊಂದಿಗೆ ಚೆಲ್ಲಾಟವಾಡಿರುವ ಆರೋಪ ಎದುರಿಸುತ್ತಿದ್ದಾರೆ. …
Read More »